ADVERTISEMENT

ಛತ್ತೀಸಗಡ: ನಕ್ಸಲ್‌ ಕಮಾಂಡರ್‌ ಹತ್ಯೆ

ಪಿಟಿಐ
Published 8 ಜೂನ್ 2018, 19:30 IST
Last Updated 8 ಜೂನ್ 2018, 19:30 IST

ರಾಯಪುರ: ಛತ್ತೀಸಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ಗೆ ನಕ್ಸಲ್‌ ಕಮಾಂಡರ್‌ ಬಲಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೋತಿ ಫರ್ಸಾ (28) ಮೃತ ನಕ್ಸಲ್‌ ಕಮಾಂಡರ್‌. 'ಜರಮೊಂಗಿಯಾ ಅರಣ್ಯ ಪ್ರದೇಶದಲ್ಲಿ ಜಿಲ್ಲಾ ಮೀಸಲು ವಿಶೇಷ ಪಡೆ ಮತ್ತು ಸ್ಥಳೀಯ ಪೊಲೀಸರು  ಜಂಟಿಯಾಗಿ ಶೋಧ ಕಾರ್ಯ ನಡೆಸುತ್ತಿದ್ದಾಗ 25ಕ್ಕಿಂತಲೂ ಹೆಚ್ಚು ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿದಾಳಿ ನಡೆಸಿದಾಗ ನಕ್ಸಲ್‌ ಕಮಾಂಡರ್‌ ಮೃತಪಟ್ಟಿದ್ದಾನೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೋಹಿತ್‌ ಗರ್ಗ್‌ ಹೇಳಿದ್ದಾರೆ.

’ಸುಮಾರು ಒಂದು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, ಇತರ ನಕ್ಸಲರು ಪರಾರಿಯಾಗಿದ್ದಾರೆ’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.