ADVERTISEMENT

ಜಗನ್‌ಮೋಹನ್ ರೆಡ್ಡಿ ಪ್ರಕರಣ: ಬಿಸಿಸಿಐ ಮುಖ್ಯಸ್ಥ ಶ್ರೀನಿವಾಸನ್‌ಗೆ ಸಮನ್ಸ್

​ಪ್ರಜಾವಾಣಿ ವಾರ್ತೆ
Published 8 ಜೂನ್ 2012, 19:30 IST
Last Updated 8 ಜೂನ್ 2012, 19:30 IST

ಹೈದರಾಬಾದ್ (ಪಿಟಿಐ): ವೈ.ಎಸ್. ಜಗನ್‌ಮೋಹನ್ ರೆಡ್ಡಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ `ಇಂಡಿಯಾ ಸಿಮೆಂಟ್ಸ್~ ಕಂಪೆನಿ ವ್ಯವಸ್ಥಾಪಕ ನಿರ್ದೇಶಕರೂ ಆದ ಬಿಸಿಸಿಐ ಮುಖ್ಯಸ್ಥ ಎನ್. ಶ್ರೀನಿವಾಸನ್ ಅವರಿಗೆ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

`ಇಂಡಿಯಾ ಸಿಮೆಂಟ್ಸ್~ ಕಂಪೆನಿಯು ವೈ.ಎಸ್. ರಾಜಶೇಖರ ರೆಡ್ಡಿ ಅವರ ಅಧಿಕಾರಾವಧಿಯಲ್ಲಿ ಜಗನ್ ಒಡೆತನದ ಕಂಪೆನಿಗಳಲ್ಲಿ ಹೂಡಿಕೆ ಮಾಡಿದೆ ಎಂಬ ಆಪಾದನೆಯ ಹಿನ್ನೆಲೆಯಲ್ಲಿ ಶ್ರೀನಿವಾಸನ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ.

ಇನ್ನಿತರ ಸಿಮೆಂಟ್ ಕಂಪೆನಿಗಳ ಅಧಿಕಾರಿಗಳಿಗೂ ತನ್ನ ಮುಂದೆ ಹಾಜರಾಗುವಂತೆ ಸಿಬಿಐ ನಿರ್ದೇಶಿಸಿದೆ. ಈ ಕಂಪೆನಿಗಳಿಗೆ ರಾಜಶೇಖರ ರೆಡ್ಡಿ ಅವರ ಅಧಿಕಾರ ಅವಧಿಯಲ್ಲಿ ಪೂರೈಕೆ ಮಾಡಲಾಗಿದ್ದ ನೀರು ಮತ್ತು ಸುಣ್ಣದಕಲ್ಲುಗಳ ವಿಚಾರವಾಗಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಜಗನ್ ತಮ್ಮ ತಂದೆ ರಾಜಶೇಖರ ರೆಡ್ಡಿ ಅವರ ಪ್ರಭಾವವನ್ನು ಬಳಸಿಕೊಂಡು ತಾವು ನಡೆಸುತ್ತಿರುವ ಉದ್ದಿಮೆ- ಇನ್ನಿತರ ವ್ಯವಹಾರಗಳಲ್ಲಿ ಹೂಡಿಕೆ ಮಾಡಿರುವ ಕೆಲವರಿಗೆ ಕಾನೂನು ಬಾಹಿರವಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತನಿಖಾ ಸಂಸ್ಥೆಯು ಆರೋಪಪಟ್ಟಿಯಲ್ಲಿ ಆಪಾದಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.