ಹೈದರಾಬಾದ್ (ಪಿಟಿಐ): ಅಕ್ರಮ ಆಸ್ತಿ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ವೈಎಸ್‌ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್‌ಮೋಹನ್ ರೆಡ್ಡಿ (ಜಗನ್) ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜೂನ್ 25ರವರೆಗೆ ವಿಸ್ತರಿಸಲಾಗಿದೆ.
ಈ ಮಧ್ಯೆ ಸಿಬಿಐ, ಜಗನ್ ಮೇಲೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಕೋರ್ಟ್‌ನ ಅನುಮತಿ ಕೋರಿದೆ.
ಆಂಧ್ರಪ್ರದೇಶದ 18 ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ಉಪಚುನಾವಣೆ ನಡೆಯಲಿದ್ದು, ಚುನಾವಣೆಯ ಹಿಂದಿನ ದಿನ ಕೋರ್ಟ್ ಈ ಆದೇಶ ನೀಡಿದೆ.
ಈ ಉಪ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಜಗನ್ ಬಂಧನದ ವಿಚಾರವನ್ನು ಮುಂದಿಟ್ಟುಕೊಂಡು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ಭಾಷಣ ಮಾಡುತ್ತಿದ್ದರು.
ಸಿಬಿಐ ಅರ್ಜಿ: ಏತನ್ಮಧ್ಯೆ ಸಿಬಿಐ ಅಧಿಕಾರಿಗಳು ಜಗನ್ ಹಾಗೂ ಅವರ ಆರ್ಥಿಕ ಸಲಹೆಗಾರ ವಿ. ವಿಜಯಸಾಯಿ ರೆಡ್ಡಿ ಅವರನ್ನು ಮಂಪರು ಪರೀಕ್ಷೆ ಹಾಗೂ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಅನುಮತಿ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ.
ಅಕ್ರಮ ವ್ಯವಹಾರಗಳಿಂದ ಜಗನ್‌ಗೆ ಹೆಚ್ಚಿನ ಲಾಭವಾಗಿದೆ. ಆದರೆ, ಈ ಪ್ರಕರಣಗಳಲ್ಲಿ ವಿಜಯಸಾಯಿ ಸೂತ್ರಧಾರರಾಗಿದ್ದು, ಜಗನ್‌ಗೆ ಸಲಹೆ ನೀಡುತ್ತಿದ್ದುದು ವಿಚಾರಣೆಯ ಸಮಯದಲ್ಲಿ ಸಾಬೀತಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.