ADVERTISEMENT

ಜನನಪೂರ್ವ ಲಿಂಗ ಪತ್ತೆ: ವಿವಾದದ ಸುಳಿಯಲ್ಲಿ ಶಾರುಖ್

​ಪ್ರಜಾವಾಣಿ ವಾರ್ತೆ
Published 17 ಜೂನ್ 2013, 19:59 IST
Last Updated 17 ಜೂನ್ 2013, 19:59 IST

ಮುಂಬೈ (ಪಿಟಿಐ): ಬಾಲಿವುಡ್ ನಟ ಶಾರುಖ್ ಖಾನ್ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯಲು ಉದ್ದೇಶಿಸಿದ್ದು, ಈ ಸಂಬಂಧ ಲಿಂಗಪತ್ತೆಗೆ ಯತ್ನಿಸಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.

ಈ ಕುರಿತು ಖಾನ್ ಅವರ ಸಹಾಯಕರನ್ನು ವರದಿಗಾರರು ಪ್ರಶ್ನಿಸಿದಾಗ, `ಈ ಬಗ್ಗೆ ನಾವು ಮಾತನಾಡುವುದಿಲ್ಲ' ಎಂದು ತಿಳಿಸಿದ್ದಾರೆ.ಹುಟ್ಟಲಿರುವ ಮಗು ಗಂಡು ಎಂದು ಶಾರುಖ್ ಪತ್ತೆ ಮಾಡಿಕೊಂಡಿರುವ ಬಗ್ಗೆ ಸ್ವಯಂ ಸೇವಾ ಸಂಸ್ಥೆ ಮತ್ತು ಭಾರತೀಯ ರೇಡಿಯೊಲಾಜಿಕಲ್ ಮತ್ತು ಇಮೇಜಿಂಗ್ ಸಂಸ್ಥೆಯು ತನಿಖೆ ನಡೆಸುವಂತೆ ಒತ್ತಾಯಿಸಿದೆ. ಮಹಾರಾಷ್ಟ್ರ ಸರ್ಕಾರವು ಈ ಬಗ್ಗೆ ಪರಿಶೀಲನೆ ನಡೆಸುವಂತೆ ಬೃಹನ್ ಮುಂಬೈ ನಗರಪಾಲಿಕೆಗೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.