ADVERTISEMENT

ಜಮ್ಮು ಕಾಶ್ಮೀರದಲ್ಲಿ ಮಧ್ಯರಾತ್ರಿಯಿಂದ ವ್ಯಾಪಕ ಮಳೆ, ಹಿಮಪಾತಕ್ಕೆ ಭೂಕುಸಿತ: ಹೆದ್ದಾರಿ ಬಂದ್

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2018, 11:28 IST
Last Updated 2 ಮಾರ್ಚ್ 2018, 11:28 IST
-ಸಾಂದರ್ಭಿಕ ಚಿತ್ರ
-ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಗುರುವಾರ ಮಧ್ಯರಾತ್ರಿಯಿಂದ ವ್ಯಾಪಕವಾಗಿ ಮಳೆ, ಹಿಮ ಸುರಿದಿದೆ. ಭೂಕುಸಿತ ಕಾರಣ 300 ಕಿ.ಮೀ ಉದ್ದದ ಜಮ್ಮು– ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಶುಕ್ರವಾರ ನಿಲ್ಲಿಸಲಾಗಿದೆ.

ಜಮ್ಮು– ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಂಬನ್ ಜಿಲ್ಲೆಯ ವ್ಯಾಪ್ತಿಯಲ್ಲಿ ಕಲ್ಲು ಬಂಡೆಗಳು ಕುಸಿದು ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ವಾಹನ ಸಂಚಾರವನ್ನು ನಿಲ್ಲಿಸಲಾಗಿದೆ. ಪ್ರಯಾಣಿಕರು ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಿ ವಿಷಯ ತಿಳಿದುಕೊಂಡು ಈ ಹೆದ್ದಾರಿಯನ್ನು ಪ್ರವೇಶಿಸಬೇಕು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಜ್ಯದ ಶಿಖರಗಳಲ್ಲಿ ಹಿಮ ಮತ್ತು ತಗ್ಗು ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಹಿಮಪಾತ ಕಾರಣ ಕುಪ್ವರ – ತಂಗಧರ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.