ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಜಾಮಿಯಾ ಮಸೀದಿಯ ಎದುರು ಗುರುವಾರ ರಾತ್ರಿ ನಡೆದ ಗಲಭೆಯಲ್ಲಿ ಉದ್ರಿಕ್ತರ ಗುಂಪು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಹೊಡೆದು ಕೊಂದಿದೆ.
ಡಿವೈಎಸ್ಪಿ ಮೊಹಮ್ಮದ್ ಆಯೂಬ್ ಪಂಡಿತ್ ಮೃತ ಪೊಲೀಸ್ ಅಧಿಕಾರಿ.
‘ಉದ್ರಿಕ್ತರ ಗುಂಪು ಆಯೂಬ್ ಅವರೊಂದಿಗೆ ಮಾತಿನ ಚಕಮಕಿ ನಡೆಸಿದೆ. ಗಲಭೆ ಹೆಚ್ಚಾದಾಗ ಆಯೂಬ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದರಿಂದ ಮತ್ತಷ್ಟು ಕೆರಳಿದ ಜನರ ಗುಂಪು ನೌಹಟ್ಟಾ ಪ್ರದೇಶದ ಬಾಟಾ ಚೌಕದ ಬಳಿ ಅವರನ್ನು ಹೊಡೆದು ಕೊಂದಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.