ADVERTISEMENT

ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ

ಏಜೆನ್ಸೀಸ್
Published 19 ಜೂನ್ 2018, 10:53 IST
Last Updated 19 ಜೂನ್ 2018, 10:53 IST
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ   

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ- ಬಿಜೆಪಿ ಮೈತ್ರಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅಲ್ಲಿನ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಮಧ್ಯಾಹ್ನ ರಾಜ್ಯಪಾಲ ಎನ್. ಎನ್. ವ್ಹೋರಾ ಅವರಿಗೆ ಮುಫ್ತಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಾಶ್ಮೀರದಲ್ಲಿ ಶಾಂತಿ ಕಾಪಾಡಲು ಮತ್ತು ಜಮ್ಮು ಕಾಶ್ಮೀರದ ಕ್ಷಿಪ್ರ ಅಭಿವೃದ್ಧಿಗಾಗಿ ನಾವು ಪಿಡಿಪಿಯೊಂದಿಗೆ ಕೈಜೋಡಿಸಿ ಸರ್ಕಾರ ರಚಿಸಿದ್ದೆವು. ಆದರೆ ಇನ್ನು ಮುಂದೆ ನಾವು ಜಮ್ಮು ಕಾಶ್ಮೀರದಲ್ಲಿ ಪಿಡಿಪಿಯೊಂದಿಗೆ ಮೈತ್ರಿ ಮುಂದುವರಿಸುವುದಿಲ್ಲ. ನಾವು ಮೈತ್ರಿ ಸರ್ಕಾರದಿಂದ ಹೊರಬರುವ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

[related]

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.