ADVERTISEMENT

ಜಮ್ಮು: ತೀವ್ರ ಚಳಿಗಾಳಿ

​ಪ್ರಜಾವಾಣಿ ವಾರ್ತೆ
Published 1 ಜನವರಿ 2012, 19:30 IST
Last Updated 1 ಜನವರಿ 2012, 19:30 IST

ಶ್ರೀನಗರ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ರಾತ್ರಿ ತೀವ್ರ ಚಳಿಗಾಳಿಯಿಂದಾಗಿ ಹೊಸ ವರ್ಷದ ಸಂಭ್ರಮದ ಕಾವು ತಣ್ಣಗಾಯಿತು.

ಲಡಾಕ್ ಪ್ರಾಂತ್ಯದ ಲೇಹ್ ಪಟ್ಟಣದಲ್ಲಿ ಅತ್ಯಂತ ಕಡಿಮೆ ತಾಪಮಾನ -18.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನೆರೆಯ ಕಾರ್ಗಿಲ್ ಪಟ್ಟಣದಲ್ಲಿ ಕನಿಷ್ಠ ತಾಪಮಾನ -16 ಡಿಗ್ರಿ ಸೆಲ್ಸಿಯಸ್, ಶ್ರೀನಗರದಲ್ಲಿ -4.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.