ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಅವಳಿ ದಾಳಿ: 12 ಜನರ ಸಾವು

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2013, 9:30 IST
Last Updated 26 ಸೆಪ್ಟೆಂಬರ್ 2013, 9:30 IST

ಜಮ್ಮು (ಪಿಟಿಐ): ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪಾಕ್ ಪ್ರಧಾನಿ ನವಾಜ್ ಷರೀಪ್ ಅವರ ನಡುವಿನ ಮಾತುಕತೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಉಗ್ರರು ಜಮ್ಮು  ಮತ್ತು ಕಾಶ್ಮೀರದಲ್ಲಿ ಪೊಲೀಸ್ ಠಾಣೆ ಮತ್ತು ಸೇನಾ ನೆಲೆಗಳ ಮೇಲೆ ದಾಳಿ ನಡೆಸಿ 12 ಜನರನ್ನು ಹತ್ಯೆಮಾಡಿರುವ ಘಟನೆ ಗುರುವಾರ ನಡೆದಿದೆ.

ಎರಡು ಪ್ರತ್ಯೇಕ ದಾಳಿಯಿಂದ ಪೊಲೀಸರು, ಯೋಧರು ಮತ್ತು ನಾಗರೀಕರು ಸೇರಿದಂತೆ 12 ಜನರು ಮೃತಪಟ್ಟಿದ್ದಾರೆ.
ಜಮ್ಮುವಿನ ಸಾಂಬಾ ಸಮೀಪದ ಸೇನೆ ನೆಲೆಯ ಮೇಲೆ ದಾಳಿ ಮಾಡಿರುವ ಉಗ್ರರು ಲೆ. ಕರ್ನಲ್ ಸೇರಿದಂತೆ ಮೂವರು ಯೋಧರನ್ನು ಹತ್ಯೆ ಮಾಡಿದ್ದಾರೆ.

ಮತ್ತೊಂದೆಡೆ ಕಥುವಾ ಪ್ರದೇಶದ ಹೀರಾನಗರ್ ಪೊಲೀಸ್ ಠಾಣೆ ಮೇಲೆ  ನಡೆದ ಉಗ್ರರ ದಾಳಿಯಲ್ಲಿ ಐವರು ಪೊಲೀಸರು ಮತ್ತು ನಾಲ್ವರು ನಾಗರೀಕರು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.