
ಪ್ರಜಾವಾಣಿ ವಾರ್ತೆಜಮ್ಮು (ಐಎಎನ್‌ಎಸ್): ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 6 ಬಿಜೆಪಿ ಶಾಸಕರನ್ನು ಪಕ್ಷ ಉಚ್ಚಾಟಿಸಿದೆ.
ಏಪ್ರಿಲ್‌ನಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ, ಪಕ್ಷದ ಸಂಸದೀಯ ಮಂಡಳಿ ಈ ಕ್ರಮ ಜರುಗಿಸಿದೆ.
ಬಿಜೆಪಿಯ 7 ಶಾಸಕರು ಪಕ್ಷದ ಅಭ್ಯರ್ಥಿ ಠಾಕೂರ್ ರಣಜಿತ್ ಸಿಂಗ್ ಅವರ ಬದಲಿಗೆ ನ್ಯಾಷನಲ್ ಕಾನ್ಫರೆನ್ಸ್- ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗೆ ಮತ ಚಲಾಯಿಸಿದ್ದರು. ಇದರಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.