ADVERTISEMENT

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಶಶಿಕಲಾ ಅರ್ಜಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2012, 19:30 IST
Last Updated 10 ಏಪ್ರಿಲ್ 2012, 19:30 IST

ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಜೊತೆಗೆ ಅಕ್ರಮ ಆಸ್ತಿ ಗಳಿಕೆ ವಿವಾದದಲ್ಲಿ ಸಿಲುಕಿರುವ ಅವರ ಸ್ನೇಹಿತೆ ಶಶಿಕಲಾ ನಟರಾಜನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಪರ ವಕೀಲರು ನೀಡಿರುವ ಕೆಲವೊಂದು ದಾಖಲೆಗಳನ್ನು ಕೋರ್ಟ್ ಮಾನ್ಯ ಮಾಡದೇ ಇರುವುದನ್ನು (ನಾನ್ ಎಕ್ಸಿಬಿಟ್ಸ್) ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಎರಡನೆಯ ಆರೋಪಿ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಕೆಲವೊಂದು ದಾಖಲೆಗಳನ್ನು ನೀಡಿದೆ. ಆದರೆ ಕೆಲವು ತಾಂತ್ರಿಕ ದೋಷಗಳು ಇರುವ ಹಿನ್ನೆಲೆಯಲ್ಲಿ ಕೋರ್ಟ್ ಅದನ್ನು ಮಾನ್ಯ ಮಾಡಲಿಲ್ಲ. ಇದನ್ನು ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ದಾಖಲೆಗಳನ್ನು ಮಾನ್ಯ ಮಾಡದೇ ಹೋದರೆ ತಮಗೆ ವಿಶೇಷ ಕೋರ್ಟ್‌ನಲ್ಲಿ ಕೇಳುವ ಕೆಲವೊಂದು ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುವುದಿಲ್ಲ ಎನ್ನುವುದು ಅವರ ವಾದ. ಆದರೆ ಈ ವಾದವನ್ನು ವಿಶೇಷ ಕೋರ್ಟ್ ತಳ್ಳಿಹಾಕಿದ್ದು, ಈ ಆದೇಶ ರದ್ದತಿಗೆ ಅವರು ಕೋರಿದ್ದಾರೆ. ಈ ಅರ್ಜಿಯು ಬುಧವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.