ADVERTISEMENT

‘ಜಯಲಲಿತಾ ಆಸ್ಪತ್ರೆಯಲ್ಲಿದ್ದಾಗ ಎಲ್ಲ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲಾಗಿತ್ತು’

ಏಜೆನ್ಸೀಸ್
Published 22 ಮಾರ್ಚ್ 2018, 12:42 IST
Last Updated 22 ಮಾರ್ಚ್ 2018, 12:42 IST
ಜೆ. ಜಯಲಲಿತಾ (ಸಂಗ್ರಹ ಚಿತ್ರ)
ಜೆ. ಜಯಲಲಿತಾ (ಸಂಗ್ರಹ ಚಿತ್ರ)   

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ದಾಖಲಾಗಿದ್ದ ದಿನಗಳಲ್ಲಿ ಆಸ್ಪತ್ರೆಯ ಎಲ್ಲ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್‌ ಮಾಡಲಾಗಿತ್ತು ಎಂದು ಅಪೊಲೊ ಆಸ್ಪತ್ರೆಯ ಅಧ್ಯಕ್ಷ ಪ್ರತಾಪ್ ಸಿ ರೆಡ್ಡಿ ತಿಳಿಸಿದ್ದಾರೆ.

ಅಪೊಲೊ ಅಂತರರಾಷ್ಟ್ರೀಯ ಉಪನ್ಯಾಸ ಕಾರ್ಯಕ್ರಮವೊಂದರ ಪ್ರಯುಕ್ತ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮಾಹಿತಿ ನೀಡಿದ್ದಾರೆ.

‘ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾದ ನಂತರ ತೀವ್ರ ನಿಗಾ ಘಟಕದಲ್ಲಿರುವ ಇತರ ರೋಗಿಗಳನ್ನು ಸ್ಥಳಾಂತರಗೊಳಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಜಯಲಲಿತಾ ಅವರೊಬ್ಬರೇ ಇದ್ದರು. ಆ ಸಂದರ್ಭ ಆಸ್ಪತ್ರೆಯ ಎಲ್ಲ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲಾಗಿತ್ತು ಎಂದು ರೆಡ್ಡಿ ತಿಳಿಸಿದ್ದಾರೆ.

ADVERTISEMENT

‘ಜಯಲಲಿತಾ ಅವರಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಅವರ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಎ. ಆರ್ಮುಗಸ್ವಾಮಿ ಆಯೋಗಕ್ಕೆ ನೀಡಲಾಗಿದೆ. ಜಯಲಲಿತಾ ಅವರು 2016ರ ಸೆಪ್ಟೆಂಬರ್ 22 ಆಸ್ಪತ್ರೆಗೆ ದಾಖಲಾಗಿದ್ದರು. ಡಿಸೆಂಬರ್ 4ರಂದು ಅವರಿಗೆ ಹೃದಯಾಘಾತವಾಗಿತ್ತು. ಅದರ ಮರುದಿನ ಅವರ ಸಾವಿನ ಸುದ್ದಿ ಪ್ರಕಟಿಸಲಾಗಿತ್ತು’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.