ADVERTISEMENT

ಜಯಾಗೆ ಚಿಕಿತ್ಸೆ: ಸ್ಥಗಿತಗೊಂಡಿದ್ದ ಸಿಸಿಟಿವಿ ಕ್ಯಾಮೆರಾ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2018, 20:45 IST
Last Updated 22 ಮಾರ್ಚ್ 2018, 20:45 IST
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ   

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ದಾಖಲಾಗಿದ್ದ ಅವಧಿಯಲ್ಲಿ ಆಸ್ಪತ್ರೆಯ ಎರಡನೇ ಅಂತಸ್ತಿನ ಎಲ್ಲ ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಸ್ಥಗಿತಗೊಳಿಸಲಾಗಿತ್ತು. ಹಾಗಾಗಿ ಅವುಗಳ ದೃಶ್ಯಾವಳಿ ಯಾರಿಗೂ ದೊರೆಯುವುದಿಲ್ಲ ಎಂದು ಇಲ್ಲಿನ ಅಪೊಲೊ ಆಸ್ಪತ್ರೆಯ ಅಧ್ಯಕ್ಷ ಪ್ರತಾಪ್ ಸಿ.ರೆಡ್ಡಿ ತಿಳಿಸಿದ್ದಾರೆ.

‘ಜಯಾ ಆಸ್ಪತ್ರೆಗೆ ದಾಖಲಾದ ಕೂಡಲೇ ಐಸಿಯು ಪ್ರವೇಶ ನಿರ್ಬಂಧಿಸಲಾಯಿತು. ಇತರ ರೋಗಿಗಳಿಗೆ ಬೇರೆ ಐಸಿಯು ವ್ಯವಸ್ಥೆ ಮಾಡಲಾಗಿತ್ತು. ದೃಶ್ಯಾವಳಿಯಲ್ಲಿ ಎಲ್ಲರೂ ಅವರನ್ನು ನೋಡುತ್ತಾರೆ ಎಂಬ ಕಾರಣಕ್ಕೆ ಈ ಕ್ರಮಕೈಗೊಳ್ಳಲಾಗಿತ್ತು ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜಯಲಲಿತಾ ಅವರ ವೈದ್ಯಕೀಯ ದಾಖಲೆಗಳನ್ನು ಅವರ ಸಾವಿನ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಎ. ಆರ್ಮುಗಸ್ವಾಮಿ ಸಮಿತಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.