ADVERTISEMENT

ಜಾಮೀನು: ಕನಿಮೊಳಿ ಸುಪ್ರೀಂಗೆ ಮೊರೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2011, 19:30 IST
Last Updated 10 ಜೂನ್ 2011, 19:30 IST

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣದ ಆರೋಪಿಗಳಾದ ಡಿಎಂಕೆ ಸಂಸದೆ ಕನಿಮೊಳಿ ಹಾಗೂ ಕಲೈಙ್ಞರ್ ಟಿ.ವಿಯ ವ್ಯವಸ್ಥಾಪಕ ನಿರ್ದೇಶಕ ಶರತ್ ಕುಮಾರ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ದೆಹಲಿ ಹೈಕೋರ್ಟ್ ತಮ್ಮ ಜಾಮೀನು ಅರ್ಜಿ ವಜಾ ಮಾಡಿರುವುದನ್ನು ಪ್ರಶ್ನಿಸಿ ಈ ಇಬ್ಬರೂ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿರುವುದಾಗಿ ಅವರ ವಕೀಲ ವಿ.ಜಿ.ಪರಗಸಂ ತಿಳಿಸಿದ್ದಾರೆ.

ಕನಿಮೊಳಿ ಮತ್ತು ಶರತ್ ಕುಮಾರ್ ರಾಜಕೀಯವಾಗಿ ಅತ್ಯಂತ ಪ್ರಭಾವಶಾಲಿಗಳಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಇದೇ 8ರಂದು ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.