ADVERTISEMENT

ಜಾರ್ಖಂಡ್‌ನಲ್ಲಿ ಮೈತ್ರಿಕೂಟ ಸರ್ಕಾರ ಜೆಎಂಎಂಗೆ ಮುಖ್ಯಮಂತ್ರಿ ಸ್ಥಾನ

​ಪ್ರಜಾವಾಣಿ ವಾರ್ತೆ
Published 5 ಜುಲೈ 2013, 19:59 IST
Last Updated 5 ಜುಲೈ 2013, 19:59 IST

ನವದೆಹಲಿ (ಪಿಟಿಐ): ಜಾರ್ಖಂಡ್‌ನಲ್ಲಿ ಮೈತ್ರಿಕೂಟ ಸರ್ಕಾರ ರಚನೆಗೆ ಕಾಂಗ್ರೆಸ್ ಹಾಗೂ ಜೆಎಂಎಂ ಒಪ್ಪಂದಕ್ಕೆ ಬಂದಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿವೆ.

ಸದ್ಯ ಮಾಡಿಕೊಂಡಿರುವ ಒಪ್ಪಂದದಂತೆ ಜೆಎಂಎಂ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ. ಲೋಕಸಭಾ ಚುನಾವಣೆಯಲ್ಲಿ 14 ಸ್ಥಾನಗಳಲ್ಲಿ 10 ರಲ್ಲಿ ಕಾಂಗ್ರೆಸ್ ಸ್ಪರ್ಧಿಸಿದರೆ ಕೇವಲ 4 ರಲ್ಲಿ ಜೆಎಂಎಂ ಕಣಕ್ಕಿಳಿಯಲಿದೆ.

ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಜೆಎಂಎಂ ನಾಯಕ ಹೇಮಂತ್ ಸೊರೇನ್, ಶುಕ್ರವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿದ ನಂತರ ನೂತನ ಸರ್ಕಾರ ರಚನೆಯ ಘೋಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.