ADVERTISEMENT

ಜಿಲ್ಲಾಧಿಕಾರಿ ಕಚೇರಿಯಲ್ಲಿ ಆತ್ಮಹತ್ಯೆ ಯತ್ನ

ಪೊಲೀಸರ ಬೆದರಿಕೆಗೆ ಬೇಸತ್ತ ಕುಟುಂಬ

ಪಿಟಿಐ
Published 23 ಅಕ್ಟೋಬರ್ 2017, 18:42 IST
Last Updated 23 ಅಕ್ಟೋಬರ್ 2017, 18:42 IST

ತಿರುನೆಲ್ವೇಲಿ: ಸಾಲಗಾರನ ಕಿರುಕುಳ ತಾಳಲಾರದೆ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ ದಂಪತಿ ತಾವೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲೇ ಸೋಮವಾರ ನಡೆದಿದೆ.

‘ಎರಡು ಮತ್ತು ಐದು ವರ್ಷದ ಮಕ್ಕಳು ಸೇರಿದಂತೆ ನಾಲ್ವರನ್ನೂ ಆಸ್ಪತ್ರೆಗೆ ಸೇರಿಸಲಾಗಿದೆ. ಸಾಲಗಾರನ ವಿರುದ್ಧ ದೂರು ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ದಂಪತಿ ಪ್ರತಿಭಟಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT