ADVERTISEMENT

ಟಟ್ರಾ: ಸುಪ್ರೀಂಗೆ ವಸ್ತು ಸ್ಥಿತಿ ವರದಿ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2012, 19:30 IST
Last Updated 22 ಆಗಸ್ಟ್ 2012, 19:30 IST

ನವದೆಹಲಿ (ಪಿಟಿಐ): ಟಟ್ರಾ ಟ್ರಕ್ ಹಗರಣದ ಆರೋಪಿ, ವೆಕ್ಟ್ರಾ ಕಂಪೆನಿಯ ಮುಖ್ಯಸ್ಥ ರವಿಂದರ್ ರಿಶಿ ಅವರ ತನಿಖೆಗೆ ಸಂಬಂಧಿಸಿದ ವಸ್ತು ಸ್ಥಿತಿ ವರದಿಯನ್ನು ಸಿಬಿಐ ಬುಧವಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಸಿದ್ಧಾರ್ಥ ಲುಥ್ರಾ ಅವರು ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಹಾಗೂ ಚೆಲಮೇಶ್ವರ್ ಅವರನ್ನು ಒಳಗೊಂಡ ಪೀಠಕ್ಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.