ADVERTISEMENT

ಡಾ.ಕೆ.ಯಲ್ಲಪ್ಪ ನಿಧನ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2012, 19:59 IST
Last Updated 26 ಡಿಸೆಂಬರ್ 2012, 19:59 IST

ಬೆಂಗಳೂರು: ಚರ್ಮರೋಗ ತಜ್ಞ ಡಾ.ಕೆ.ಯಲ್ಲಪ್ಪ (73) ಅವರು ಬುಧವಾರ ಬೆಳಿಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರು ಇಬ್ಬರು ಪತ್ನಿಯರು ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೊದಲ ಪತ್ನಿಗೆ ಮಕ್ಕಳು ಆಗಲಿಲ್ಲ ಎಂಬ ಕಾರಣಕ್ಕೆ ಎರಡನೇ ಮದುವೆ ಆಗಿದ್ದರು.
ಅಮೆರಿಕದಲ್ಲಿರುವ ಪುತ್ರರಿಬ್ಬರೂ ವೈದ್ಯರು. ಅವರು ಬಂದ ನಂತರ ಹುಟ್ಟೂರಾದ ಪಾವಗಡ ತಾಲ್ಲೂಕಿನ ವೆಂಕಟಾಪುರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಕೆಲವು ವರ್ಷ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಸ್ವಯಂ ನಿವೃತ್ತಿ ನಂತರ ದುಬೈಗೆ ತೆರಳಿದ್ದರು. ಅಲ್ಲಿಂದ ವಾಪಸಾದ ಬಳಿಕ ನಗರದ ಅನೇಕ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಚರ್ಮರೋಗ ತಜ್ಞರಾಗಿ ಕಾರ್ಯನಿರ್ವಹಿಸಿದ್ದರು.

ಹುಟ್ಟೂರಿನ ಸುತ್ತಮುತ್ತಲ ಗ್ರಾಮದ ಜನರಿಗೆ ಉಚಿತ ಚಿಕಿತ್ಸೆ ಮತ್ತು ಔಷಧಿ ನೀಡುವುದರ ಮೂಲಕ ಜನಪ್ರಿಯತೆ ಗಳಿಸಿದ್ದರು. ತಮ್ಮ 18 ಎಕರೆ ಕೃಷಿ ಭೂಮಿಯಲ್ಲಿ ಉಚಿತ ವಿದ್ಯಾರ್ಥಿನಿಲಯ ನಿರ್ಮಿಸಿ, ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದರು. ವಿದ್ಯಾರ್ಥಿನಿಲಯದ ನಿರ್ವಹಣೆಯ ಜವಾಬ್ದಾರಿಯನ್ನು ರಾಮಕೃಷ್ಣ ಆಶ್ರಮಕ್ಕೆ ನೀಡಿದ್ದಾರೆ. 18 ಎಕರೆ ಕೃಷಿ ಭೂಮಿ ಮತ್ತು ಅಲ್ಲಿರುವ ಕಟ್ಟಡಗಳನ್ನು ಆಶ್ರಮದ ಹೆಸರಿಗೆ ಇತ್ತೀಚೆಗೆ ವಿಲ್ ಬರೆದಿದ್ದಾರೆ. ಕುಟುಂಬದವರ ಸಂಪರ್ಕಕ್ಕೆ ದೂ: 98801 62640

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.