ADVERTISEMENT

ಡೆಂಗಿ ಚಿಕಿತ್ಸೆಗೆ ದುಡ್ಡಿಲ್ಲದೆ ಮಗನ ಜತೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2017, 9:10 IST
Last Updated 4 ಅಕ್ಟೋಬರ್ 2017, 9:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚೆನ್ನೈ: ಡೆಂಗಿ ಜ್ವರದಿಂದ ಬಳಲುತ್ತಿದ್ದ ತಾಯಿ ಮತ್ತು ಮಗ ಚಿಕಿತ್ಸೆಗೆ ದುಡ್ಡಿಲ್ಲದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಮಿಳುನಾಡಿನ ಪಾಲಕುರಿಚಿ ಎಂಬಲ್ಲಿ ನಡೆದಿದೆ.

ಪುನ್‌ಗೋಡಿ ಎಂಬ ಮಹಿಳೆ ಮತ್ತು ಆಕೆಯ ಮಗ ಆತ್ಮಹತ್ಯೆ ಮಾಡಿಕೊಂಡವರು. ಇವರು ಕಳೆದ ಒಂದು ತಿಂಗಳಿನಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದರು ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಜ್ವರದಿಂದ ಬಳಲುತ್ತಿರುವ ತಾಯಿ ಮತ್ತು ಮಗನನ್ನು ಅವರ ಸಂಬಂಧಿಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ವೈದ್ಯರು ತಪಾಸಣೆ ನಡೆಸಿದಾಗ ತಾಯಿ ಮತ್ತು ಮಗ ಇಬ್ಬರಿಗೂ ಡೆಂಗಿ ಇರುವುದು ಗೊತ್ತಾಗಿತ್ತು. ಹೆಚ್ಚಿನ ಚಿಕಿತ್ಸೆಯ ಅಗತ್ಯ ಇರುವುದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗುವಂತೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಸೂಚಿಸಿದ್ದರು. ಆದರೆ, ಚಿಕಿತ್ಸಗೆ ಲಕ್ಷಾಂತರ ರೂಪಾಯಿ ಹಣ ಬೇಕಾಗಿತ್ತು. ಇದರಿಂದ ಬೇಸತ್ತ ಪುನ್‌ಗೋಡಿ ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದಾರೆ.

ADVERTISEMENT

ಘಟನೆ ಬೆನ್ನಲ್ಲೇ, ಬಡ ನಾಗರಿಕರಿಗೆ ತಮಿಳುನಾಡು ಸರ್ಕಾರ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸದಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.