ADVERTISEMENT

ಡೆಂಗೆ ನಿಯಂತ್ರಣಕ್ಕೆ ಶೀಘ್ರ ಲಸಿಕೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2012, 20:33 IST
Last Updated 30 ನವೆಂಬರ್ 2012, 20:33 IST

ನವದೆಹಲಿ (ಪಿಟಿಐ): ಮಾರಕ ಡೆಂಗೆ ರೋಗ ನಿಯಂತ್ರಣಕ್ಕಾಗಿ ಲಸಿಕೆ ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲೇ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.

`ಫ್ರಾನ್ಸ್‌ನ ಔಷಧ ಕಂಪೆನಿಯೊಂದು ಅಭಿವೃದ್ಧಿ ಪಡಿಸಿರುವ ಈ ಲಸಿಕೆ ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಪರೀಕ್ಷಾರ್ಥ ಪ್ರಯೋಗ ನಡೆಯುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ' ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಆಜಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

`ಸುಭಾಷ್‌ಚಂದ್ರ ತನಿಖೆಗೆ ಹಾಜರು'
ನವದೆಹಲಿ (ಐಎಎನ್‌ಎಸ್):
ಉದ್ಯಮಿ ನವೀನ್ ಜಿಂದಾಲ್ ಅವರಿಂದ ಝೀ ನ್ಯೂಸ್‌ನ ಇಬ್ಬರು ಪತ್ರಕರ್ತರು ರೂ. 100 ಕೋಟಿ ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ಬಂಧಿತರಾಗಿರುವ ಪ್ರಕರಣದ ತನಿಖೆಯಲ್ಲಿ ಝೀ ವಾಹಿನಿ ಸಮೂಹದ ಅಧ್ಯಕ್ಷ ಸುಭಾಷ್ ಚಂದ್ರ ಪಾಲ್ಗೊಳ್ಳಲಾಗಿದ್ದಾರೆ ಎಂದು ವಾಹಿನಿಯ ಪರ ವಕೀಲರು ತಿಳಿಸಿದ್ದಾರೆ.

ADVERTISEMENT

`ಸುಭಾಷ್ ಚಂದ್ರ ವಿದೇಶದಲ್ಲಿದ್ದಾರೆ. ಆದರೆ ಶೀಘ್ರದಲ್ಲೇ ತನಿಖೆಯಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ಸುಪ್ರೀಂ ಕೋರ್ಟ್‌ನಲ್ಲಿ ಝೀ ನ್ಯೂಸ್ ಪರ ವಕಾಲತ್ತು ವಹಿಸಿರುವ ಹಿರಿಯ ವಕೀಲ ಆರ್.ಕೆ.ಹಂಡೂ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.