ADVERTISEMENT

ತಂದೆಯಿಂದಲೇ ಮಗಳ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2012, 21:51 IST
Last Updated 27 ನವೆಂಬರ್ 2012, 21:51 IST

ಶಿಮ್ಲಾ (ಐಎಎನ್‌ಎಸ್): ಸ್ವಂತ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಈ ಜಿಲ್ಲೆಯ ಗೊಲ್ಚಾ ಗ್ರಾಮದಲ್ಲಿ ನಡೆದಿದೆ.

ಬಂಧಿತ ಇಂದರ್ ಸಿಂಗ್ ಒಂದು ವರ್ಷದಿಂದ ತನ್ನ 15 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ. ಸೋಮವಾರ ರಾತ್ರಿ ಸಹ ಆತ ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಡಿವೈಎಸ್ಪಿ ರಾಜ್‌ಕುಮಾರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಅತ್ಯಾಚಾರದ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಕೊಲ್ಲುವುದಾಗಿ ಆತ ಮಗಳಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ADVERTISEMENT

ಅತ್ಯಾಚಾರಕ್ಕೊಳಗಾದ ಬಾಲಕಿಯೇ ಪೊಲೀಸರಿಗೆ ದೂರು ನೀಡಿದ್ದಳು. ದೂರಿನ ಅನ್ವಯ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಬುಧವಾರ ನ್ಯಾಯಾಲಯದ ಎದುರು ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.