ADVERTISEMENT

ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ: ಸೋನಿಯಾ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2012, 11:55 IST
Last Updated 23 ಡಿಸೆಂಬರ್ 2012, 11:55 IST

ನವದೆಹಲಿ: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಾರು ಪ್ರತಿಭಟನಾಕಾರರು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭಾನುವಾರ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.

ಭೇಟಿ ಸಂದರ್ಭದಲ್ಲಿ ಆರೋಪಿಗಳ ವಿರುದ್ಧ ಶೀಘ್ರದಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರಿಗೆ ಸೋನಿಯಾಗಾಂಧಿ ಭರವಸೆ ನೀಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಒಂದು ವೇಳೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ವಿಳಂಬವಾದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ ಎನ್ನಲಾಗಿದೆ.

ಮಹಿಳೆಯರ ವಿರುದ್ಧದ ದೌರ್ಜನ್ಯ ತಡೆಗೆ ಸಂಸತ್ತಿನಲ್ಲಿ ವಿಶೇಷ ಮಸೂದೆ ಮಂಡಿಸುವ ಬಗ್ಗೆ ಸೋನಿಯಾ ಗಾಂಧಿ ಈ ಸಂದರ್ಭದಲ್ಲಿ ಪ್ರಸ್ತಾಪಿಸಿದರು ಎಂದು ಅವರನ್ನು ಭೇಟಿ ಮಾಡಿದ ಬಳಿಕ ಪ್ರತಿಭಟನಾಕಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.