ಚೆನ್ನೈ(ಪಿಟಿಐ): ಮಧ್ಯಮ ವರ್ಗದ ಜನರಿಗೆ ಉತ್ತಮ ಗುಣಮಟ್ಟದ ಮತ್ತು ಕಡಿಮೆ ಬೆಲೆಯಲ್ಲಿ ಕುಡಿಯುವ ನೀರು ಒದಗಿಸಲು ಜಯಲಲಿತಾ ನೇತೃತ್ವದ ತಮಿಳುನಾಡು ಸರ್ಕಾರ ರಾಜ್ಯದಾದ್ಯಂತ `ಅಮ್ಮ ಮಿನರಲ್ ವಾಟರ್' ನೀರು ಶುದ್ಧೀಕರಣದ 9 ಘಟಕಗಳನ್ನು ಸ್ಥಾಪಿಸಲು ಮುಂದಾಗಿದೆ. ಈ ಘಟಕಗಳಲ್ಲಿ ತಯಾರಿಸಲಾದ ಪ್ರತಿ ಲೀಟರ್ ನೀರಿನ ಬಾಟಲಿಗೆ ರೂ10 ದರ ವಿಧಿಸಲಾಗಿದೆ.
`ಈ ನೀರು ಶುದ್ಧೀಕರಣ ಘಟಕಗಳನ್ನು ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ಆರಂಭಿಸಲಾಗುವುದು. ಜನರಿಗೆ ಕಡಿಮೆ ಬೆಲೆಯಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು ಈ ಯೋಜನೆ ರೂಪಿಸಲಾಗಿದೆ' ಎಂದು ಮುಖ್ಯಮಂತ್ರಿ ಜಯಲಲಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಚೆಗೆ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯವರು ಕುಡಿಯುವ ನೀರು ನಿಯಮಾವಳಿ ಪ್ರಕಾರ ಪರವಾನಗಿ ಇಲ್ಲದೆ ನಡೆಯುತ್ತಿದ್ದ 92 ನೀರಿನ ಘಟಕಗಳನ್ನು ಮುಚ್ಚಿಸಿದ್ದರು. ಇದರಿಂದ ಚೆನ್ನೈನ ನಾಗರಿಕರು ನೀರಿಗಾಗಿ ಪರಿತಪಿಸುವಂತಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.