ADVERTISEMENT

ತಮಿಳುನಾಡು: 29 ಮಂದಿಗೆ ತಗುಲಿದ ಎಚ್1ಎನ್1

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2012, 19:30 IST
Last Updated 7 ಏಪ್ರಿಲ್ 2012, 19:30 IST

ಚೆನ್ನೈ (ಪಿಟಿಐ): ತಮಿಳುನಾಡಿನಲ್ಲಿ 29 ಜನರಿಗೆ ಎಚ್1ಎನ್1 ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಚೆನ್ನೈ, ಕೊಯಮತ್ತೂರ್ ಮತ್ತು ತಿರುಪುರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬಂದಿವೆ.

ಆದರೆ ಇದು ಅಲ್ಲಲ್ಲಿ ಮಾತ್ರ ಕಾಣಿಸಿಕೊಂಡಿದ್ದು ಸಾಂಕ್ರಾಮಿಕವಾಗಿ ವ್ಯಾಪಿಸಿಲ್ಲ. ಮಕ್ಕಳು ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವ ವೃದ್ಧರಿಗೆ ರೋಗ ಹರಡುವ ಸಾಧ್ಯತೆ ಹೆಚ್ಚು. ಆದರೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ವಿ. ಎಸ್. ವಿಜಯ್ ಹೇಳಿದ್ದಾರೆ.

ಎಚ್1ಎನ್1 ಸೋಂಕಿನಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ನಂತರ ಮಾತನಾಡಿದ ಅವರು, ತಿರುಪುರದಲ್ಲಿ ಕಳೆದ ವಾರ 75 ವರ್ಷದ ವೃದ್ಧರೊಬ್ಬರು ಈ ರೋಗದಿಂದ ಮೃತರಾಗಿದ್ದರು.

 ಅವರ ಕುಟುಂಬದ 26 ಜನರಿಗೆ ಜ್ವರ ಹರಡದಂತೆ ಚುಚ್ಚುಮದ್ದು ಹಾಕಿಸಲಾಗಿದೆ. ಮತ್ತು ಅವರ‌್ಯಾರಿಗೆ ಸೋಂಕು ತಗುಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು ಹಾಗೂ 12 ಖಾಸಗಿ ಪ್ರಯೋಗಾಲಯಗಳಲ್ಲಿ ರಕ್ತ ಪರೀಕ್ಷೆ ನಡೆಸಲಾಗಿದ್ದು, 25 ಸಾವಿರ ಚುಚ್ಚುಮ್ದ್ದದನ್ನು ಈಗಾಗಲೇ ಪೂರೈಸಲಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.