ADVERTISEMENT

ತರುಣ್‌ ತೇಜ್‌ಪಾಲ್‌ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಣೆ

ಏಜೆನ್ಸೀಸ್
Published 9 ಏಪ್ರಿಲ್ 2018, 10:46 IST
Last Updated 9 ಏಪ್ರಿಲ್ 2018, 10:46 IST
ತರುಣ್‌ ತೇಜ್‌ಪಾಲ್‌ (ಸಂಗ್ರಹ ಚಿತ್ರ).
ತರುಣ್‌ ತೇಜ್‌ಪಾಲ್‌ (ಸಂಗ್ರಹ ಚಿತ್ರ).   

ನವದೆಹಲಿ: ಮಹಿಳಾ ಸಹೋದ್ಯೋಗಿ ಮೇಲೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ‘ತೆಹಲ್ಕಾ’ ಮಾಜಿ ಪ್ರಧಾನ ಸಂಪಾದಕ ತರುಣ್‌ ತೇಜ್‌ಪಾಲ್‌ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಿತು.

ಅತ್ಯಾಚಾರ, ಲೈಂಗಿಕ ಕಿರುಕುಳ ಹಾಗೂ ಮಹಿಳೆಯ ಮಾನಭಂಗ ಪ್ರಕರಣಗಳಿಗೆ ಸಂಬಂಧಿಸಿದಂತೆ ತೇಜ್‌ಪಾಲ್‌ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್‌ ನಿರಾಕರಿಸಿದ್ದು, ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT