ನವದೆಹಲಿ: ಕಾಂಗ್ರೆಸ್ ಹಾಗೂ ಬಿಜೆಪಿ ಹೆಚ್ಚುಕಮ್ಮಿ ಸಮಬಲದತ್ತ ಸಾಗುವ ಮೂಲಕ ಉತ್ತರಾಖಂಡದಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ.
ಒಟ್ಟು ಸ್ಥಾನಗಳ ಪೈಕಿ ಕಾಂಗ್ರೆಸ್ 32 ಹಾಗೂ ಬಿಜೆಪಿ 31 ಸ್ಥಾನಗಳಲ್ಲಿ ಗೆದ್ದಿವೆ. ಬಿಎಸ್‌ಪಿ 3 ಹಾಗೂ ಉತ್ತರಾಖಂಡ ಕ್ರಾಂತಿ ದಳ (ಪಿ) ಒಂದು ಸ್ಥಾನದಲ್ಲಿ ಜಯ ಗಳಿಸಿವೆ. 70 ಸದಸ್ಯ ಬಲದ ವಿಧಾನಸಭೆಯಲ್ಲಿ ಯಾವ ಪಕ್ಷ ಬಹುಮತ ಕಾಯ್ದುಕೊಳ್ಳುತ್ತದೆ ಎನ್ನುವುದು ಕುತೂಹಲದ ಸಂಗತಿಯಾಗಿಯೇ ಉಳಿದಿದೆ.
ಮೂರು ಸ್ಥಾನಗಳಲ್ಲಿ ಗೆದ್ದಿರುವ ಬಿಎಸ್‌ಪಿ ಯಾರ ಕಡೆ ಒಲವು ತೋರುತ್ತದೆ ಎನ್ನುವುದರತ್ತ ಈಗ ಎಲ್ಲರ ಗಮನ ನೆಟ್ಟಿದೆ.
ಮುಖ್ಯಮಂತ್ರಿ ಬಿ.ಸಿ.ಖಂಡೂರಿ ಅವರು ಕಾಂಗ್ರೆಸ್‌ನ ಎಸ್. ಎಸ್.ನೇಗಿ ಅವರಿಂದ 4632 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದಾರೆ.
ಈ ನಡುವೆ ಕೇಂದ್ರ ಸಂಸದೀಯ ವ್ಯವಹಾರ ಖಾತೆ ರಾಜ್ಯ ಸಚಿವ ಹರೀಶ್ ರಾವತ್ ಅವರು, ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಬಿ.ಸಿ.ಖಂಡೂರಿ ಅವರು, ತಮ್ಮ ಪಕ್ಷವೇ ಸರ್ಕಾರ ರಚಿಸುತ್ತದೆ ಎಂಬ ಆತ್ಮವಿಶ್ವಾಸ ಹೊಂದಿದ್ದಾರೆ. `ನಾನು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ. ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ~ ಎಂದು ಖಂಡೂರಿ ಹೇಳಿದ್ದಾರೆ. ಆಂತರಿಕ ಕುತಂತ್ರದಿಂದಾಗಿಯೇ ಖಂಡೂರಿ ಚುನಾವಣೆಯಲ್ಲಿ ಸೋಲು ಕಾಣಬೇಕಾಯಿತು ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ.
ಗೆದ್ದವರು... * ಮಾಜಿ ಮುಖ್ಯಮಂತ್ರಿ ರಮೇಶ್ ಪೋಖ್ರಿಯಾಲ್ ನಿಶಾಂಕ್ (ಬಿಜೆಪಿ-ದ್ವೈವಾಲಾ) |
ಬಿದ್ದವರು... * ಪ್ರಕಾಶ್ ಪಂತ್ (ಬಿಜೆಪಿ-ಪಿತೋಡ್‌ಗಡ) |
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.