ADVERTISEMENT

ತೃಣಮೂಲದಿಂದ 48 ಸ್ಪರ್ಧಿಗಳು

​ಪ್ರಜಾವಾಣಿ ವಾರ್ತೆ
Published 23 ಜನವರಿ 2012, 19:30 IST
Last Updated 23 ಜನವರಿ 2012, 19:30 IST

ಕೋಲ್ಕತ್ತ (ಪಿಟಿಐ): ಮಣಿಪುರದ 48 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೃಣಮೂಲ ಕಾಂಗ್ರೆಸ್ ನಿರ್ಧರಿಸಿದೆ.

ರಾಜ್ಯದಲ್ಲಿ ಜಾರಿಯಲ್ಲಿರುವ ಸೇನಾ ಪಡೆ ವಿಶೇಷಾಧಿಕಾರ ಕಾಯ್ದೆ (ಎಎಫ್‌ಎಸ್‌ಎ) ವಿರುದ್ಧ ಹರಿಹಾಯ್ದಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್, `ವಿಶೇಷಾಧಿಕಾರ ಕಾಯ್ದೆಯ ದುರ್ಬಳಕೆ ಹೆಚ್ಚಾಗುತ್ತಿದ್ದು, ಮಣಿಪುರದ ಜನತೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಾಯ್ದೆ ಹಿಂತೆಗೆದುಕೊಳ್ಳುವಂತೆ ನಮ್ಮ ಸಂಸದರು ಸಂಸತ್‌ನಲ್ಲಿ ಒತ್ತಾಯಿಸಲಿದ್ದಾರೆ~ ಎಂದು ಜನತೆಗೆ ಭರವಸೆ ನೀಡಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.