ತಿರುವನಂತಪುರ (ಪಿಟಿಐ): ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಮುಂಬರುವ ಚುನಾವಣೆಯಲ್ಲಿ ಬಹುಮತ ಪಡೆಯುವುದಿಲ್ಲ. ಆದ್ದರಿಂದ ತೃತೀಯ ರಂಗ ರಚನೆಗೆ ಇದು ಸಕಾಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಅವರು ಹೇಳಿದ್ದಾರೆ.
ಪ್ರಧಾನಿ ಅಭ್ಯರ್ಥಿ ಯಾರು ಎಂಬುದು ಮುಖ್ಯವಲ್ಲ, ಪ್ರಾದೇಶಿಕ ಪಕ್ಷಗಳು ನೀತಿ ಮತ್ತು ಕಾರ್ಯಕ್ರಮಗಳ ಆಧಾರದ ಮೇಲೆ ತೃತೀಯ ರಂಗ ರಚಿಸಲು ಈಗ ಕಾಲ ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ.
ದೆಹಲಿ ವಿಧಾನಸಭೆಯ ಚುನಾವಣೆ ಫಲಿತಾಂಶ ಬಹಳ ಮಹತ್ವವಾದುದು ಎಂದ ಅವರು, ತೃತೀಯ ರಂಗವನ್ನು ಸೇರಿಕೊಳ್ಳುವುದು ಅಥವಾ ಬಿಡುವುದು ಆಮ್ ಆದ್ಮಿ ಪಕ್ಷಕ್ಕೆ ಬಿಟ್ಟಿದ್ದು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.