ADVERTISEMENT

ತೆಲಂಗಾಣ: ಕಾಂಗ್ರೆಸ್ ಶಾಸಕ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2011, 19:30 IST
Last Updated 24 ಸೆಪ್ಟೆಂಬರ್ 2011, 19:30 IST

ಹೈದರಾಬಾದ್, (ಐಎಎನ್‌ಎಸ್): ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಒತ್ತಾಯಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕ ಟಿ. ರಾಜಯ್ಯ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

 ವಾರಂಗಲ್ ಜಿಲ್ಲೆಯ ಘಾನ್‌ಪುರ ಕ್ಷೇತ್ರದ ಶಾಸಕರಾಗಿರುವ ರಾಜಯ್ಯ ಅವರು ರಾಜೀನಾಮೆಯನ್ನು ಫ್ಯಾಕ್ಸ್ ಮೂಲಕ ಸ್ಪೀಕರ್‌ಗೆ ಕಳುಹಿಸಿದ್ದಾರೆ. ರಾಜೀನಾಮೆ ಅಂಗೀಕರಿಸುವಂತೆ ಒತ್ತಾಯಿಸಿ ವಿಧಾನಸಭೆಯ ಎದುರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಅವರು ಎಚ್ಚರಿಸಿದ್ದಾರೆ.

ಮೂಲಸೌಕರ್ಯ ಸಚಿವ ಕೆ. ವೆಂಕಟ್ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ರಾಜಯ್ಯ ನಿರ್ಧಾರ ಹೊರಬಿದ್ದಿದೆ.

ಪ್ರತ್ಯೇಕ ರಾಜ್ಯಕ್ಕಾಗಿ ನಡೆಯುತ್ತಿರುವ ಹೋರಾಟ ವಿವಿಧ ರಾಜಕೀಯ ಪಕ್ಷಗಳ ಮೇಲೂ ತೀವ್ರ ಪರಿಣಾಮ ಬೀರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.