ADVERTISEMENT

ತೆಲಂಗಾಣ ಚರ್ಚೆ ಇಲ್ಲ: ಶಿಂಧೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2013, 19:59 IST
Last Updated 19 ಸೆಪ್ಟೆಂಬರ್ 2013, 19:59 IST

ನವದೆಹಲಿ (ಪಿಟಿಐ): ಕೇಂದ್ರ ಸಚಿವ ಸಂಪುಟದ ಸಭೆ ಶುಕ್ರವಾರ ನಡೆಯಲಿದ್ದು ತೆಲಂಗಾಣ ರಾಜ್ಯ ರಚನೆಯ ವಿಷಯ ಬಹುತೇಕ ಚರ್ಚೆಗೆ ಬರುವ ಸಾಧ್ಯತೆಗಳಿಲ್ಲ.

‘ತೆಲಂಗಾಣ ಕುರಿತು ತಮ್ಮ ಸಚಿವಾಲಯ ಸಿದ್ಧಪಡಿಸಿದ ಕಡತವನ್ನು ಸಂಪುಟದ ಮುಂದೆ ಇಡಬೇಕಾಗಿದೆ. ಆದರೆ ಸಮಯದ ಅಭಾವದಿಂದ ಇದನ್ನು ಪರಿಶೀಲನೆ ನಡೆಸಲು ಆಗಿಲ್ಲ. ಶುಕ್ರವಾರ ಕಡತ ನೋಡುವೆ’ ಎಂದು ಗೃಹ ಸಚಿವ ಸುಶೀಲಕುಮಾರ್ ಶಿಂಧೆ ಸುದ್ದಿಗಾರರಿಗೆ ತಿಳಿಸಿದರು.

ತೆಲಂಗಾಣ ರಾಜ್ಯ ರಚನೆಯ ಕುರಿತು ಎ.ಕೆ. ಆಂಟನಿ ನೇತೃತ್ವದ ಸಮಿತಿ ವರದಿ ನೀಡಿದೆ. ಸಮಿತಿಯ ಶಿಫಾರಸುಗಳನ್ನು ಸಂಪುಟ ಬಹುತೇಕ ಒಪ್ಪುವ ಸಾಧ್ಯತೆಗಳಿವೆ ಎನ್ನಲಾಗಿದೆ. ‘ರಾಜಕೀಯ ಸಮ್ಮತಿ’ ಪಡೆಯಲು ಶಿಂಧೆ ಈ ಕಡತವನ್ನು  ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಧಾನಿ ಡಾ, ಮನಮೋಹನ್‌ ಸಿಂಗ್‌ ಅವರಿಗೆ ಸಲ್ಲಿಸುವರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.