
ಹೈದರಾಬಾದ್ (ಪಿಟಿಐ): ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಒತ್ತಾಯಿಸಿ ಟಿಆರ್‌ಎಸ್ ಮತ್ತು ತೆಲಂಗಾಣ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಕರೆ ನೀಡಿದ್ದ `ವಿಧಾನ ಸೌಧ ಮುತ್ತಿಗೆ ಪ್ರತಿಭಟನೆ' ಹಿಂಸಾಚಾರಕ್ಕೆ ತಿರುಗಿ ಪೊಲೀಸರು ಲಾಠಿ ಚಾರ್ಚ್ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.
ಘಟನೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸಿದ ವರದಿಯಾಗಿಲ್ಲ. ಟಿಆರ್‌ಎಸ್ ಮತ್ತು ಜೆಎಸಿಯ ನಾಯಕರನ್ನು ಬಂಧಿಸುತ್ತಿದ್ದಂತೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಿದರು. ಇವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸುವ ಮೂಲಕ ಲಾಠಿ ಚಾರ್ಚ್ ನಡೆಸಿದರು ಎಂದು ಹೈದರಾಬಾದ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಿಆರ್‌ಎಸ್ ಸೇರಿದಂತೆ ಬಿಜೆಪಿ, ಸಿಪಿಎಂ, ಮತ್ತು ಟಿಡಿಪಿಯ ಹಿರಿಯ ನಾಯಕರನ್ನು ಇದೇ ಸಂದರ್ಭದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.