ADVERTISEMENT

ತೆಲಂಗಾಣ ಬಂದ್‌ಗೆ ನೀರಸ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:30 IST
Last Updated 1 ಅಕ್ಟೋಬರ್ 2012, 19:30 IST

ಹೈದರಾಬಾದ್ (ಪಿಟಿಐ): ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಒತ್ತಾಯಿಸಿ ಭಾನುವಾರ ನಡೆದ `ತೆಲಂಗಾಣ ರ‌್ಯಾಲಿ~ ಯ ವೇಳೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ತೆಲಂಗಾಣ ಪರ ವಿದ್ಯಾರ್ಥಿ ಸಂಘಟನೆ ಮತ್ತು ಉಸ್ಮಾನಿಯಾ ವಿಶ್ವವಿದ್ಯಾಲಯ ಜಂಟಿ ಕ್ರಿಯಾ ಸಮಿತಿ ನೀಡಿದ ಬಂದ್ ಕರೆಗೆ  ಹೈದರಾಬಾದ್ ಹಾಗೂ ತೆಲಂಗಾಣ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂತು.

ರಾಜಧಾನಿ ಹೈದರಾಬಾದ್‌ನಲ್ಲಿ ವ್ಯಾಪಾರ ವಹಿವಾಟುಗಳು ಎಂದಿನಂತೆ ಸಾಗಿದ್ದವು. ಸರ್ಕಾರಿ ಬಸ್‌ಗಳು ಹಾಗೂ ಖಾಸಗಿ ವಾಹನಗಳು ರಸ್ತೆಗಿಳಿದಿದ್ದವು.

ಕೆಲವು ಖಾಸಗಿ ಶೈಕ್ಷಣಿಕ ಸಂಸ್ಥೆಗಳು ಮುಚ್ಚಿದ್ದರೂ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರೀಂನಗರ, ಮೇಡಕ್, ಮೆಹಬೂಬ್‌ನಗರ ಮತ್ತು ವಾರಂಗಲ್ ಜಿಲ್ಲೆಗಳಲ್ಲಿ ಬಂದ್‌ಗೆ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದುವರದಿಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.