ADVERTISEMENT

ತೆಲಂಗಾಣ: ವಿದ್ಯಾರ್ಥಿಗಳು - ಪೊಲೀಸರ ಮಧ್ಯೆ ಘರ್ಷಣೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2013, 11:23 IST
Last Updated 7 ಸೆಪ್ಟೆಂಬರ್ 2013, 11:23 IST

ಹೈದರಾಬಾದ್(ಐಎಎನ್‌ಎಸ್): ಲಾಲ್ ಬಹದ್ದೂರ್ ಕ್ರೀಡಾಂಗಣದಲ್ಲಿ ಶನಿವಾರ ರಾಯಲ ಸೀಮಾ ಭಾಗದ ಸರ್ಕಾರಿ ಅಧಿಕಾರಿಗಳು ನಡೆಸುತ್ತಿದ್ದ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಉಸ್ಮಾನಿಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಿದರು.

ರ್‍ಯಾಲಿಯಲ್ಲಿ ಬಂದ ವಿದ್ಯಾರ್ಥಿಗಳು `ಜೈ ತೆಲಂಗಾಣ' ಎಂದು ಘೋಷಣೆ ಕೂಗುತ್ತಾ ಲಾಲ್ ಬಹದ್ದೂರ್ ಕ್ರೀಡಾಂಗಣಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಅವರನ್ನು ತಡೆಯಲು ಪೊಲೀಸರು ಮುಂದಾದಾಗ ಪರಸ್ಪರರ ಮಧ್ಯೆ  ಘರ್ಷಣೆ ನಡೆಯಿತು. ವಿದ್ಯಾರ್ಥಿಗಳು ಪೊಲೀಸರು ಹಾಕಿದ್ದ ಬ್ಯಾರಿಕೇಡ್ ತಳ್ಳಿ, ಪೊಲೀಸರತ್ತ ಕಲ್ಲು ತೂರಿದಾಗ, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ.

ರ್‍ಯಾಲಿ ನಡೆಸಿದ ಹಲವು ವಿದ್ಯಾರ್ಥಿಗಳನ್ನು ಬಂಧಿಸಿದ್ದು, ವಿಶ್ವವಿದ್ಯಾಲಯದ ಆವರಣದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ವಿದ್ಯಾರ್ಥಿಗಳು ರ್‍ಯಾಲಿ ನಡೆಸಲು ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.