ADVERTISEMENT

ತೆಲಗಿಗೆ ಮತ್ತೆ 10 ವರ್ಷ ಕಠಿಣ ಸಜೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2011, 19:30 IST
Last Updated 18 ಜೂನ್ 2011, 19:30 IST

ಪುಣೆ (ಪಿಟಿಐ): ನಕಲಿ ಸ್ಟ್ಯಾಂಪ್ ಪೇಪರ್ ಹಗರಣದ ಆರೋಪಿ ಅಬ್ದುಲ್ ಕರೀಂ ತೆಲಗಿಗೆ ಇಲ್ಲಿನ ವಿಶೇಷ ನ್ಯಾಯಾಲಯವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 10 ವರ್ಷಗಳ ಕಠಿಣ ಸಜೆ ಹಾಗೂ 9 ಲಕ್ಷ ರೂಪಾಯಿ ದಂಡ ವಿಧಿಸಿದೆ.

ನಾಸಿಕ್ ಪೊಲೀಸರು ದಾಖಲಿಸಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಈ ಶಿಕ್ಷೆ ನೀಡಲಾಗಿದೆ. ನಕಲಿ ಸ್ಟ್ಯಾಂಪ್ ಪೇಪರ್ ಹಗರಣಕ್ಕೆ ಸಂಬಂಧಿಸಿದಂತೆ ತೆಲಗಿ ವಿರುದ್ಧ 47 ಪ್ರಕರಣಗಳು ದಾಖಲಾಗಿವೆ. ಎರಡು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೆ ಒಳಗಾಗಿರುವ ತೆಲಗಿ, ಸದ್ಯ ಬೆಂಗಳೂರು ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.