ADVERTISEMENT

ತೇಜಸ್ವಿ ಯಾದವ್ ರಾಜೀನಾಮೆ ನಿರ್ಧಾರ ಕೈಗೊಳ್ಳಲು ಆರ್‌ಜೆಡಿಗೆ ನಾಲ್ಕು ದಿನ ಗಡುವು

ಏಜೆನ್ಸೀಸ್
Published 11 ಜುಲೈ 2017, 13:00 IST
Last Updated 11 ಜುಲೈ 2017, 13:00 IST
ನಿತೀಶ್ ಕುಮಾರ್ (ಸಂಗ್ರಹ ಚಿತ್ರ)
ನಿತೀಶ್ ಕುಮಾರ್ (ಸಂಗ್ರಹ ಚಿತ್ರ)   

ಪಟ್ನಾ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ರಾಜೀನಾಮೆ ಬಗ್ಗೆ ನಿರ್ಧಾರ ಕೈಗೊಳ್ಳಲು ಆಡಳಿತಾರೂಢ ಮಿತ್ರ ಪಕ್ಷ ಆರ್‌ಜೆಡಿಗೆ ಜೆಡಿಯು ಮುಖ್ಯಸ್ಥ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಲ್ಕು ದಿನ ಗಡುವು ವಿಧಿಸಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಕುಟುಂಬದವರ ಮನೆ ಹಾಗೂ ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ ವಿಚಾರವಾಗಿ ಮಂಗಳವಾರ ಪಕ್ಷದ ಸಂಸದರು, ಶಾಸಕರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ ನಿತೀಶ್‌ ಕುಮಾರ್, ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ, ತೇಜಸ್ವಿ ಅವರ ರಾಜೀನಾಮೆ ಬಗ್ಗೆ ಆರ್‌ಜೆಡಿಯೇ ನಿರ್ಧಾರ ಕೈಗೊಳ್ಳಬೇಕು ಎಂದಿದ್ದಾರೆ.

ಭ್ರಷ್ಟಾಚಾರ ಆರೋಪದ ಬಗ್ಗೆ ತೇಜಸ್ವಿ ಅವರು ವಿವರಣೆ ಹಾಗೂ ಸ್ಪಷ್ಟನೆ ನೀಡಬೇಕು ಎಂದೂ ನಿತೀಶ್ ಕುಮಾರ್ ಬಯಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.