ADVERTISEMENT

ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಅರಳಿದ ಕಮಲ

ಏಜೆನ್ಸೀಸ್
Published 3 ಮಾರ್ಚ್ 2018, 6:40 IST
Last Updated 3 ಮಾರ್ಚ್ 2018, 6:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಗರ್ತಲ, ಶಿಲ್ಲಾಂಗ್, ಕೊಹಿಮಾ: ಈಶಾನ್ಯದ ಮೂರು ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಸದ್ಯದ ವರದಿಗಳ ಪ್ರಕಾರ ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮಿತ್ರಪಕ್ಷಗಳು ಭಾರಿ ಮುನ್ನಡೆ ಕಾಯ್ದುಕೊಂಡಿವೆ.

ತ್ರಿಪುರಾದಲ್ಲಿ 25 ವರ್ಷಗಳ ಸಿಪಿಐಎಂ ಆಡಳಿತಕ್ಕೆ ತೆರೆ ಬೀಳುವ ಸಾಧ್ಯತೆ ಹೆಚ್ಚಾಗಿದ್ದು, ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆ ನಿಚ್ಚಳವಾಗಿದೆ. ಮೇಘಾಲಯದಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಸಾಧಿಸಿದೆ.

ನಾಗಾಲ್ಯಾಂಡ್: ಇತ್ತೀಚಿನ ವರದಿಗಳ ಪ್ರಕಾರ, ಬಿಜೆಪಿ ಮೈತ್ರಿಕೂಟ 31 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಪೈಕಿ, ಎನ್‌ಡಿಪಿಪಿ 20 ಸ್ಥಾನ ಹಾಗೂ ಬಿಜೆಪಿ 11 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಎನ್‌ಪಿಎಫ್‌ 22 ಸ್ಥಾನ ಹಾಗೂ ಕಾಂಗ್ರೆಸ್‌ 1 ಸ್ಥಾನದಲ್ಲಿ ಮುನ್ನಡೆಯಲ್ಲಿದೆ.

ADVERTISEMENT

ತ್ರಿಪುರಾ: ಸದ್ಯದ ಮಾಹಿತಿ ಪ್ರಕಾರ, ಬಿಜೆಪಿ ಮಿತ್ರಪಕ್ಷಗಳು 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಸಿಪಿಐಎಂ ಮಿತ್ರಪಕ್ಷಗಳು 18 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಕಾಂಗ್ರೆಸ್ ಖಾತೆ ತೆರೆದಿಲ್ಲ.

ಮೇಘಾಲಯ: ಕಾಂಗ್ರೆಸ್ 27 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಎನ್‌ಪಿಪಿ 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪಕ್ಷೇತರ ಅಭ್ಯರ್ಥಿಗಳು 8 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.