ADVERTISEMENT

ದಯಾನಿಧಿ ವಿಚಾರಣೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2011, 19:30 IST
Last Updated 15 ಜೂನ್ 2011, 19:30 IST

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಂಚಿಕೆ ಹಗರಣ ಕುರಿತಂತೆ ದೂರಸಂಪರ್ಕ ಖಾತೆ ಮಾಜಿ ಸಚಿವ ದಯಾನಿಧಿ ಮಾರನ್ ಅವರನ್ನು ಸಿಬಿಐ ಮುಂದಿನ ಕೆಲವು ವಾರಗಳಲ್ಲಿ ವಿಚಾರಣೆಗೆ ಗುರಿಪಡಿಸುವ ಸಾಧ್ಯತೆ ಇದೆ.

2001-07ರ ನಡುವೆ ಹಂಚಿಕೆಯಾದ 2ಜಿ ತರಂಗಾಂತರ ಕುರಿತು ಸಿಬಿಐ ಜುಲೈ ಮೊದಲ ವಾರದಲ್ಲಿ ಹೊಸದೊಂದು ಪ್ರಕರಣ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಮಾರನ್ ಅವರನ್ನು ವಿಚಾರಣೆಗೆ ಗುರಿಪಡಿಸಬಹುದು ಎಂದು ಸಿಬಿಐ ಮೂಲಗಳು ತಿಳಿಸಿವೆ. ಇದೇ ವಿಚಾರವಾಗಿ ಸಿಬಿಐ ಈಗಾಗಲೇ ಏರ್‌ಸೆಲ್ ಮುಖ್ಯಸ್ಥ ಸಿ. ಶಿವಶಂಕರನ್ ಅವರ ಪ್ರಾಥಮಿಕ ವಿಚಾರಣೆ ನಡೆಸಿದೆ. ಏರ್‌ಸೆಲ್ ಕಂಪೆನಿಯನ್ನು ಮಲೆಷ್ಯಾ ಮೂಲದ ಉದ್ಯಮಿಯೊಬ್ಬರಿಗೆ ಮಾರಾಟ ಮಾಡುವಲ್ಲಿ ಮಾರನ್ ಅವರ ಪಾತ್ರವೂ ಇರುವ ಬಗ್ಗೆ ಶಿವಶಂಕರನ್  ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT