
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಮೇಲೆ 2013ರಿಂದ 2015ರ ಅವಧಿಯಲ್ಲಿ ಅತಿ ಹೆಚ್ಚು ದೌರ್ಜನ್ಯ ಪ್ರಕರಣಗಳು ರಾಜಸ್ತಾನದಲ್ಲಿ ದಾಖಲಾಗಿವೆ ಎಂದು ಕೇಂದ್ರ ಸರ್ಕಾರದ ವರದಿಯೊಂದು ಹೇಳಿದೆ. ನಂತರದ ಸ್ಥಾನಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರಗಳಿವೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ (ದೌರ್ಜನ್ಯ ತಡೆ) ಕಾಯ್ದೆ ಅನುಷ್ಠಾನದ ಪರಾಮರ್ಶೆ ಸಭೆಗಾಗಿ ಸಿದ್ಧಪಡಿಸಲಾದ ವರದಿ ಈ ಅಂಕಿ ಅಂಶಗಳನ್ನು ನೀಡಿದೆ
ಕ್ರಮ ಕೈಗೊಂಡ ವರದಿ: ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಮತ್ತು ಶಿಕ್ಷೆಯಾಗುವ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಸಚಿವ ತಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ. ಕ್ರಮ ಕೈಗೊಂಡ ವರದಿ ನೀಡುವಂತೆಯೂ ಹೇಳಿದ್ದಾರೆ.
ಕ್ರಮ ಕೈಗೊಂಡ ವರದಿ
ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಮತ್ತು ಶಿಕ್ಷೆಯಾಗುವ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಸಚಿವ ತಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ. ಕ್ರಮ ಕೈಗೊಂಡ ವರದಿ ನೀಡುವಂತೆಯೂ ಹೇಳಿದ್ದಾರೆ.
ವಿಶೇಷ ನ್ಯಾಯಾಲಯ
ದಲಿತರ ವಿರುದ್ಧದ ದೌರ್ಜನ್ಯ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ 14 ರಾಜ್ಯಗಳು ಮಾತ್ರ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಿವೆ. ಕಾಯ್ದೆಗೆ ಮಾಡಿದ ತಿದ್ದುಪಡಿ ಪ್ರಕಾರ, ಪ್ರಕರಣಗಳು ಕಡಿಮೆ ಇದ್ದರೆ ಒಂದಕ್ಕಿಂತ ಹೆಚ್ಚು ಜಿಲ್ಲೆಗಳಿಗಾಗಿ ಒಂದು ವಿಶೇಷ ನ್ಯಾಯಾಲಯ ಸ್ಥಾಪಿಸಬಹುದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.