ADVERTISEMENT

ದಲಿತರ ಮೇಲೆ ಹಲ್ಲೆ: ಪ್ರಣವ್ ಮುಖರ್ಜಿ ಕಳವಳ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2016, 19:42 IST
Last Updated 14 ಆಗಸ್ಟ್ 2016, 19:42 IST
ರಾಷ್ಟ್ರ ಉದ್ದೇಶಿಸಿ ಮಾತನಾಡಿದ ಪ್ರಣವ್‌
ರಾಷ್ಟ್ರ ಉದ್ದೇಶಿಸಿ ಮಾತನಾಡಿದ ಪ್ರಣವ್‌   

ನವದೆಹಲಿ (ಪಿಟಿಐ): ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ಹಲ್ಲೆ ನಡೆಸುವುದು ರಾಷ್ಟ್ರದ ಸಹಬಾಳ್ವೆ ತತ್ವಕ್ಕೆ ವಿರುದ್ಧ. ಆದ್ದರಿಂದ ಇಂತಹ ಘಟನೆ ನಡೆದಾಗ ಕಠಿಣ ಕ್ರಮ ಜರುಗಿಸಬೇಕು ಎಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಹೇಳಿದರು.

70ನೇ ಸ್ವಾತಂತ್ರ್ಯೋತ್ಸವದ ಮುನ್ನಾದಿನ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಮುಖರ್ಜಿ, ‘ಅಸಹಿಷ್ಣುತೆ ಮತ್ತು ವಿವೇಚನಾರಹಿತ ಒಡಕು ಮೂಡಿಸುವ ರಾಜಕೀಯ ಕಾರ್ಯ ಸೂಚಿಯು ಸಾಂಸ್ಥಿಕ ವ್ಯವಸ್ಥೆಯನ್ನು ಕಡೆಗಣಿಸಿ ಸಂವಿಧಾನವನ್ನು ಬುಡಮೇಲು ಮಾಡುತ್ತದೆ. ಕೇಂದ್ರ, ರಾಜ್ಯ ಸರ್ಕಾರಗಳು, ಅಧಿಕಾರಿಗಳು ಘನತೆಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಭಾರತದ ಪುರಾತನ ಮೌಲ್ಯವನ್ನು ಎತ್ತಿಹಿಡಿ ಯಬೇಕು’ ಎಂದು ಕರೆ ನೀಡಿದರು.

ನಾಲ್ಕು ವರ್ಷಗಳಿಂದೀಚೆಗೆ ಕೆಲವು ವಿಚ್ಛಿದ್ರಕಾರಕ ಶಕ್ತಿಗಳು ತಲೆ ಎತ್ತಲು ಪ್ರಯತ್ನಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಂತಹ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಲಹೆ ಮಾಡಿದರು.
ಸಮಾಜದ ಒಗ್ಗಟ್ಟು ಮತ್ತು ರಾಜಕೀಯ ವ್ಯವಸ್ಥೆ ಇಂತಹ ಶಕ್ತಿಗಳು ತಲೆ ಎತ್ತದಂತೆ ನೋಡಿಕೊಳ್ಳುತ್ತವೆ ಎಂಬ ವಿಶ್ವಾಸ ತಮಗಿದೆ ಎಂದು ತಿಳಿಸಿದರು.
ವಿಚ್ಛಿದ್ರಕಾರಕ ಶಕ್ತಿಗಳ ಉಪಟಳವು ರಾಷ್ಟ್ರದ ಪ್ರಗತಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದರು.
ಸ್ವಾತಂತ್ರ್ಯ ಎಂಬ ಮಹಾ ವೃಕ್ಷವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ಪೋಷಿಸಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.