
ಪ್ರಜಾವಾಣಿ ವಾರ್ತೆ
ನವದೆಹಲಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ದೆಹಲಿಗೆ ಮರಳಿದ್ದಾರೆ.
56 ದಿನಗಳಿಂದ ರಜೆಯಲ್ಲಿದ್ದ ರಾಹುಲ್ ಗುರುವಾರ ಬೆಳಿಗ್ಗೆ ಥಾಯ್ ಏರ್‌ವೇಸ್ ವಿಮಾನದಲ್ಲಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಫೆಬ್ರುವರಿ 20ರಂದು ರಜೆಯ ಮೇಲೆ ತೆರಳಿದ್ದ ರಾಹುಲ್ ಮರಳಿ ದೆಹಲಿಗೆ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಹುಲ್ ನಿವಾಸಕ್ಕೆ ತೆರಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.