ADVERTISEMENT

ದೆಹಲಿಯಲ್ಲಿ ಸ್ವೀಡನ್ ವಿದೇಶಾಂಗ ಸಚಿವ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2011, 19:30 IST
Last Updated 18 ಅಕ್ಟೋಬರ್ 2011, 19:30 IST

ಮುಂಬೈ (ಐಎಎನ್‌ಎಸ್):  ಸ್ವೀಡನ್‌ನ ವಿದೇಶಾಂಗ ಸಚಿವ ಕಾರ್ಲ್ ಬಿಲ್ಟ್ ಅವರು  ಭಾರತಕ್ಕೆ ಮೂರು ದಿನಗಳ ಭೇಟಿಗಾಗಿ ಮಂಗಳವಾರ ಇಲ್ಲಿಗೆ ಆಗಮಿಸಿದ್ದಾರೆ. ಅವರು ಭಾರತೀಯ ಅಧಿಕಾರಿಗಳನ್ನು ಹಾಗೂ ಹಣಕಾಸು ಸಂಸ್ಥೆಗಳ ಮುಖಂಡರನ್ನು ಭೇಟಿಯಾಗಲಿದ್ದಾರೆ.

ಬಿಲ್ಟ್ ಅವರು ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕಾರಿಗಳನ್ನು ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್‌ಛೇಂಜ್ ಅಧಿಕಾರಿಗಳ ಜತೆ ಚರ್ಚಿಸುವರು ಅಲ್ಲದೆ ಪ್ರಮುಖ ಭಾರತೀಯ ಮತ್ತು ಸ್ವೀಡನ್ ಕಂಪೆನಿಗಳಿಗೂ ಭೇಟಿ ನೀಡಲಿದ್ದಾರೆ.

ನವದೆಹಲಿಯಲ್ಲಿ ಅವರು ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ, ರಾಷ್ಟ್ರೀಯ ಭದ್ರತಾ ಸಲಹೆಗಾರ  ಶಿವ್‌ಶಂಕರ್ ಮೆನನ್ ಮತ್ತು ಬಿಜೆಪಿಯ ಯಶವಂತ್ ಸಿನ್ಹಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.