
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ದೆಹಲಿ ಹೈಕೋರ್ಟ್ ಆವರಣದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದ್ದು, ತನಿಖೆಯಲ್ಲಿ ಪ್ರಗತಿ ಸಾಧಿಸಲಾಗಿದೆ ಎಂದು ಗೃಹ ಕಾರ್ಯದರ್ಶಿ ಆರ್.ಕೆ.ಸಿಂಗ್ ತಿಳಿಸಿದರು.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಹಲವರನ್ನು ಬಂಧಿಸಿದ್ದು, ಶಂಕಿತರನ್ನು ವಿಚಾರಣೆಗೆ ಒಳಪಡಿಸಿದೆ ಎಂದ ಅವರು, ಈಗ ದೊರೆತಿರುವ ಮಾಹಿತಿಗಳ ಬಗ್ಗೆ ಹೆಚ್ಚಿನ ವಿವರ ತಿಳಿಸಲು ಅವರು ನಿರಾಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.