ADVERTISEMENT

ದೆಹಲಿ ಹೈಕೋರ್ಟ್‌ಗೆ ಹೋಗಲು ಕಾರ್ತಿಗೆ ಅವಕಾಶ

ಪಿಟಿಐ
Published 8 ಮಾರ್ಚ್ 2018, 20:21 IST
Last Updated 8 ಮಾರ್ಚ್ 2018, 20:21 IST
ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ   

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ಹೊರಡಿಸಿದ ಎಲ್ಲಾ ಸಮನ್ಸ್‌ಗಳನ್ನು ಮತ್ತು ಕೈಗೊಂಡಿ
ರುವ ಕ್ರಮಗಳನ್ನು ರದ್ದುಪಡಿಸಬೇಕು ಎಂದು ಕಾರ್ತಿ ಚಿದಂಬರಂ ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಕಾರ್ತಿಯ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರ ಪೀಠವು ಶುಕ್ರವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ.

ಪ್ರಕರಣದಲ್ಲಿ ಮಧ್ಯಂತರ ಪರಿಹಾರಕ್ಕಾಗಿ ದೆಹಲಿ ಹೈಕೋರ್ಟ್‌ನ ಮೊರೆ ಹೋಗುವಂತೆ ಕಾರ್ತಿ ಚಿದಂಬರಂಗೆ ಸುಪ್ರೀಂ ಕೋರ್ಟ್‌ ಗುರುವಾರ ಬೆಳಿಗ್ಗೆ
ಯಷ್ಟೇ ಸೂಚಿಸಿತ್ತು. ಜತೆಗೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ತಮ್ಮ ಅರ್ಜಿಗಳನ್ನು ವಾಪಸ್ ಪಡೆಯಲೂ ಕಾರ್ತಿಗೆ ಪೀಠ ಅವಕಾಶ ನೀಡಿತ್ತು.

ADVERTISEMENT

ಈ ಪ್ರಕರಣದಲ್ಲಿ ಮಧ್ಯಂತರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಇದೇ 6ರಂದು ನಿರಾಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.