
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ದೇಶದ ವಿವಿಧ ವಿಮಾನಯಾನ ಸಂಸ್ಥೆಗಳಲ್ಲಿ ಸುಮಾರು 500 ವಿದೇಶಿ ಪೈಲಟ್‌ಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.
ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸುವ ಸಂದರ್ಭದಲ್ಲಿ ನಾಗರಿಕ ವಿಮಾನಯಾನ ಸಚಿವ ಅಜಿತ್ ಸಿಂಗ್ ಈ ಮಾಹಿತಿ ನೀಡಿದ್ದಾರೆ. ದೇಶದಲ್ಲಿರುವ ಪೈಲಟ್‌ಗಳ ಕೊರತೆಯನ್ನು ನೀಗಿಸುವುದಕ್ಕಾಗಿ ವಿದೇಶಿ ಪೈಲಟ್‌ಗಳನ್ನು ನೇಮಕ ಮಾಡಿಕೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಅವಕಾಶ ನೀಡಿದೆ ಎಂದು ಅಜಿತ್ ಸಿಂಗ್ ತಿಳಿಸಿದರು. ದೇಶದಲ್ಲಿ ಒಟ್ಟು 497 ವಿದೇಶಿ ಪೈಲಟ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಜೆಟ್ ಏರ್‌ವೇಸ್ ಸಂಸ್ಥೆ ಅತಿ ಹೆಚ್ಚು ಅಂದರೆ 183 ಪೈಲಟ್‌ಗಳನ್ನು ನೇಮಿಸಿಕೊಂಡಿದೆ. ಇಂಡಿಗೊ ಸಂಸ್ಥೆ ಎರಡನೇ ಸ್ಥಾನದಲ್ಲಿದೆ. 90 ವಿದೇಶಿ ಪೈಲಟ್‌ಗಳು ಇಂಡಿಗೊ ವಿಮಾನಯಾನ ಸಂಸ್ಥೆಯಲ್ಲಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.