ADVERTISEMENT

ದೇಶದಾದ್ಯಂತ ದಲಿತ ಸಂಘಟನೆಗಳ ಪ್ರತಿಭಟನೆ: ಮಧ್ಯ ಪ್ರದೇಶದಲ್ಲಿ 4 ಮಂದಿ ಸಾವು; ಅಂತರ್ಜಾಲ ಸೇವೆ ಸ್ಥಗಿತ

ಏಜೆನ್ಸೀಸ್
Published 2 ಏಪ್ರಿಲ್ 2018, 13:09 IST
Last Updated 2 ಏಪ್ರಿಲ್ 2018, 13:09 IST
ದೇಶದಾದ್ಯಂತ ದಲಿತ ಸಂಘಟನೆಗಳ ಪ್ರತಿಭಟನೆ: ಮಧ್ಯ ಪ್ರದೇಶದಲ್ಲಿ 4 ಮಂದಿ ಸಾವು; ಅಂತರ್ಜಾಲ ಸೇವೆ ಸ್ಥಗಿತ
ದೇಶದಾದ್ಯಂತ ದಲಿತ ಸಂಘಟನೆಗಳ ಪ್ರತಿಭಟನೆ: ಮಧ್ಯ ಪ್ರದೇಶದಲ್ಲಿ 4 ಮಂದಿ ಸಾವು; ಅಂತರ್ಜಾಲ ಸೇವೆ ಸ್ಥಗಿತ   

ನವದೆಹಲಿ: ದಲಿತ ಸಂಘಟನೆಗಳು ಸೋಮವಾರ ದೇಶದಾದ್ಯಂತ ನಡೆಸಿರುವ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಪೊಲೀಸರು ಸೇರಿ ಹಲವರು ಗಾಯಗೊಂಡಿದ್ದಾರೆ.

ಎಸ್‌ಸಿ, ಎಸ್‌ಟಿ ಕಾಯ್ದೆ ದುರ್ಬಲಗೊಳಿಸುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಭಾರತ್ ಬಂದ್‌ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಗೆ ಸಾಕ್ಷಿಯಾಯಿತು. ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ ಇಬ್ಬರು, ಭಿಂದ್‌ ಮತ್ತು ಮುರೇನಾದಲ್ಲಿ ತಲಾ ಒಬ್ಬ ಪ್ರತಿಭಟನಾಕಾರ ಮೃತಪಟ್ಟಿರುವುದಾಗಿ ಮಧ್ಯಪ್ರದೇಶ ಐಜಿ ಮಾಹಿತಿ ನೀಡಿದ್ದಾರೆ.

ಹರಿಯಾಣದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಉತ್ತರ ಪ್ರದೇಶದ ಅಝಮ್‌ಗಢದಲ್ಲಿ ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯ ಬಸ್‌ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಲಾಗಿದೆ. ಮುಝಾಫರ್‌ನಗರದಲ್ಲಿ ರಸ್ತೆ ಬದಿಯಲ್ಲಿ ಅನೇಕ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.