ADVERTISEMENT

ದೇಶೀಯ ನಿರ್ಮಿತ ಕ್ಷಿಪಣಿ ಪರೀಕ್ಷೆ ಯಶಸ್ವಿ

ಪಿಟಿಐ
Published 3 ಜುಲೈ 2017, 10:16 IST
Last Updated 3 ಜುಲೈ 2017, 10:16 IST
ದೇಶೀಯ ನಿರ್ಮಿತ ಕ್ಷಿಪಣಿ ಪರೀಕ್ಷೆ ಯಶಸ್ವಿ
ದೇಶೀಯ ನಿರ್ಮಿತ ಕ್ಷಿಪಣಿ ಪರೀಕ್ಷೆ ಯಶಸ್ವಿ   

ಬಾಲಸೋರ್‌: ಕ್ಷಿಪ್ರ ಪ್ರತಿಕ್ರಿಯೆಗೆ ಅನುವಾಗುವ  ನೆಲದಿಂದ ಆಗಸಕ್ಕೆ ಚಿಮ್ಮುವ ದೇಶೀಯ ನಿರ್ಮಿತ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ.

ಒಡಿಶಾ ಕರಾವಳಿ ಭಾಗದ ಚಾಂಡಿಪುರದ ಸಮಗ್ರ ಪರೀಕ್ಷಾ ವಲಯದಲ್ಲಿರುವ (ಐಟಿಆರ್) ಉಡಾವಣಾ ಸಂಕೀರ್ಣ 3ರಿಂದ ಬೆಳಿಗ್ಗೆ 11.25ಕ್ಕೆ ಪರೀಕ್ಷಾರ್ಥ ಕ್ಷಿಪಣಿ ಉಡಾವಣೆ ಮಾಡಲಾಯಿತು.

ನೆಲದಿಂದ ಆಕಾಶ ಮಾರ್ಗದ 25–30 ಕಿ.ಮೀ. ವ್ಯಾಪ್ತಿಯಲ್ಲಿ ನಿಗದಿ ಪಡಿಸಿದ ಹಲವು ಗುರಿಗಳನ್ನು ತಲುಪುವ ಸಾಮರ್ಥ್ಯವಿರುವ ಕ್ಷಿಪಣಿಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ.

ADVERTISEMENT

ಎಲ್ಲ ವಾತಾವರಣದಲ್ಲಿಯೂ ಕ್ಷಿಪ್ರ ಕಾರ್ಯನಿರ್ವಹಿಸುವ ಸಾಮರ್ಥ್ಯವಿರುವ ಈ ಕ್ಷಿಪಣಿಯ  ಮೊದಲ ಪರೀಕ್ಷಾರ್ಥ ಉಡಾವಣೆ ಜೂನ್‌ 4ರಂದು ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.