ADVERTISEMENT

ಧಾರ್ಮಿಕ ಸಂಸ್ಥೆಗಳ ಬೆಂಬಲ ಸಲ್ಲ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2012, 19:30 IST
Last Updated 4 ಫೆಬ್ರುವರಿ 2012, 19:30 IST

ಚೆನ್ನೈ (ಪಿಟಿಐ): ಕೂಡುಂಕುಳಂ ಪರಮಾಣು ವಿದ್ಯುತ್ ಸ್ಥಾವರ ಯೋಜನೆ ಕುರಿತಾಗಿ ಸ್ಥಳೀಯರಲ್ಲಿರುವ ಆತಂಕವನ್ನು ಹೋಗಲಾಡಿಸುವ ಜವಾಬ್ದಾರಿ ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳ ಮೇಲಿದೆ ಎಂದು ಹೇಳಿರುವ ಕೇಂದ್ರ ಸಚಿವ ವಿ.ನಾರಾಯಣ ಸ್ವಾಮಿ, ಯೋಜನೆ ವಿರೋಧಿ ಪ್ರತಿಭಟನಾಕಾರರಿಗೆ ಯಾವುದೇ ಧಾರ್ಮಿಕ ಸಂಸ್ಥೆಗಳು ಪ್ರಚೋದನೆ ನೀಡಬಾರದು ಎಂದು ಮನವಿ ಮಾಡಿದ್ದಾರೆ.

ಕೂಡುಂಕುಳಂ ಯೋಜನೆ ಬಿಕ್ಕಟ್ಟು ಪರಿಹರಿಸುವ ಸಂಬಂಧ ಈ ವಾರದ ಆರಂಭದಲ್ಲಿ ನಡೆದ ನಾಲ್ಕನೇ ಸುತ್ತಿನ ಮಾತುಕತೆ ವೇಳೆ ಹಿಂದೂ ಮುನ್ನಾನಿ ಮತ್ತು ಪ್ರತಿಭಟನಾಕಾರರ ನಡುವೆ ಸಂಭವಿಸಿದ ಘರ್ಷಣೆಯನ್ನು ಉಲ್ಲೇಖಿಸಿದ ಪ್ರಧಾನ ಮಂತ್ರಿ ಕಚೇರಿಯ ರಾಜ್ಯ ಖಾತೆ ಸಚಿವರಾದ ವಿ. ನಾರಾಯಣ ಸ್ವಾಮಿ,  `ಧರ್ಮದ ಹೆಸರಿನಲ್ಲಿ ಪ್ರತಿಭಟನೆಗೆ ಪ್ರಚೋದನೆ ನೀಡುತ್ತಿರುವುದು ವಿಷಾದನೀಯ~ ಎಂದಿದ್ದಾರೆ. ಧಾರ್ಮಿಕ ಸಂಘಟನೆಗಳು ಇಂತಹ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.