ADVERTISEMENT

ನಕಲಿ ಎನ್‌ಕೌಂಟರ್‌ ಸುಪ್ರೀಂ ಕೋರ್ಟ್‌ ಅಸಮಾಧಾನ

ಪಿಟಿಐ
Published 19 ಮೇ 2018, 19:30 IST
Last Updated 19 ಮೇ 2018, 19:30 IST

ನವದೆಹಲಿ: ಮಣಿಪುರದಲ್ಲಿ ನಡೆದಿರುವ ನಕಲಿ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ರಚಿಸಿದ ಎಸ್‌ಐಟಿ ಬರೆದಿರುವ ಪತ್ರಗಳಿಗೆ ರಕ್ಷಣಾ ಸಚಿವಾಲಯ ಯಾವುದೇ ಸ್ಪಂದನೆ ನೀಡದಿರುವುದಕ್ಕೆ ಸುಪ್ರೀಂಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಸಿಬಿಐನ ವಿಶೇಷ ತನಿಖಾ ದಳ (ಎಸ್‌ಐಟಿ)ಯು ಮಣಿಪುರದಲ್ಲಿ ಸೇನೆ, ಅಸ್ಸಾಂ ರೈಫಲ್ಸ್‌ ಹಾಗೂ ಪೊಲೀಸರು ನಡೆಸಿದ್ದಾರೆ ಎನ್ನಲಾಗಿರುವ ನಕಲಿ ಎನ್‌ಕೌಂಟರ್‌ ಪ್ರಕರಣಗಳ ತನಿಖೆ ನಡೆಸುತ್ತಿದೆ.

ತನಿಖೆಯ ಅಂಗವಾಗಿ ರಕ್ಷಣಾ ಸಚಿವಾಲಯಕ್ಕೆ ಎಸ್‌ಐಟಿ ಕೆಲವು ಪತ್ರ ಬರೆದಿದ್ದು, ಇದಕ್ಕೆ ಯಾವುದೇ ಪ್ರತಿಕ್ರಿಯೆ ಬಾರದಿರುವುದಕ್ಕೆ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಮದನ್ ಬಿ. ಲೋಕೂರ್ ಹಾಗೂ ಯು.ಯು. ಲಲಿತ್‌ ನೇತೃತ್ವದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.