ADVERTISEMENT

ನಕ್ಸಲರ ಗುಂಡಿನ ದಾಳಿ: 20 ಯೋಧರ ಸಾವು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2014, 9:35 IST
Last Updated 11 ಮಾರ್ಚ್ 2014, 9:35 IST

ರಾಯಪುರ (ಪಿಟಿಐ): ಛತೀಸ್‌ಗಡ ರಾಜ್ಯದ ಶುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಸಿಆರ್‌ಪಿಎಫ್‌ ಯೋಧರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 20 ಯೋಧರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಇಲ್ಲಿನ ಬಸ್ತರ್‌ ಮತ್ತು ಶುಕ್ಮಾದ ಗಡಿಯಲ್ಲಿನ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಆರ್‌ಪಿಎಫ್‌ ಯೋಧರು ಮತ್ತು ಛತೀಸ್‌ಗಡ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ನಕ್ಸಲರು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ 20 ಯೋಧರು ಮೃತಪಟ್ಟಿರುವುದಾಗಿ ಛತೀಸ್‌ಗಡದ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮುಖೇಶ್‌ ಗುಪ್ತ ತಿಳಿಸಿದ್ದಾರೆ.

ಮೃತರಲ್ಲಿ ಐದು ಜನ ಛತೀಸ್‌ಗಡ ಪೊಲೀಸರು ಸೇರಿದ್ದಾರೆ. ಘಟನೆಯಲ್ಲಿ ನಕ್ಸಲರು ಹತರಾಗಿರುವ ಬಗ್ಗೆ ಯಾವುದೇ ವರದಿಗಳು ಬಂದಿಲ್ಲ ಎಂದು ಗುಪ್ತ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ಪಡೆಯನ್ನು ಕಳುಹಿಸಲಾಗಿದ್ದು ನಕ್ಸಲರ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ಗುಪ್ತ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT