ADVERTISEMENT

ನಕ್ಸಲೀಯರ ಸ್ಥಳಕ್ಕೆ ಭೇಟಿ ಬೇಡ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2011, 17:15 IST
Last Updated 14 ಮಾರ್ಚ್ 2011, 17:15 IST

ಭುವನೇಶ್ವರ (ಐಎಎನ್‌ಎಸ್): ಮಾವೊವಾದಿಗಳ ಪ್ರಭಾವ ಹೆಚ್ಚಿರುವ ಪ್ರದೇಶಗಳಿಗೆ ಅದರಲ್ಲೂ ರಾತ್ರಿ ವೇಳೆಯಲ್ಲಿ ಭೇಟಿ ನೀಡದಂತೆ ಒಡಿಶಾ ಸರ್ಕಾರ ಆಯಾ ಜಿಲ್ಲಾ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದೆ.

ಮಾಲ್ಕನ್‌ಗಿರಿ ಜಿಲ್ಲಾಧಿಕಾರಿ ಆರ್.ವಿ. ಕೃಷ್ಣ ಮತ್ತು ಕಿರಿಯ ಎಂಜಿನಿಯರ್ ಪವಿತ್ರ ಮಝಿ ಅವರನ್ನು ಇತ್ತೀಚಿಗೆ ಮಾವೊವಾದಿಗಳು ಅಪಹರಿಸಿ ನಂತರ ಬಿಡುಗಡೆಗೊಳಿಸಿದ್ದ ಹಿನ್ನೆಲೆಯಲ್ಲಿ ಈ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ಪ್ರವಾಸದ ಯೋಜನೆಯನ್ನು ಮುಂಚಿತವಾಗಿ ಯಾರಿಗೂ ತಿಳಿಸಬಾರದು. ಸರ್ಕಾರಿ ವಾಹನಗಳಲ್ಲಿ ಸಂಚರಿಸಬಾರದು. ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.